ಸದಸ್ಯತ್ವ ನೊಂದಣಿ ಮಾಡಿ ಅಭಿಯಾನ ಯಶಸ್ವಿಗೊಳಿಸಿ

KannadaprabhaNewsNetwork |  
Published : Sep 10, 2024, 01:32 AM IST
ಚಿತ್ರ ಶೀರ್ಷಿಕೆ9ಎಂ ಎಲ್ ಕೆ3ಮೊಳಕಾಲ್ಮುರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ತಿಪ್ಪೇಸ್ವಾಮಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಪೂರಕವಾಗಿ ಕಾರ್ಯಕರ್ತರು ಸಂಘಟಿತರಾಗಬೇಕು. ಕ್ಷೇತ್ರದಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡುವ ಮೂಲಕ ಪಕ್ಷವನ್ನು ಬಲಿಷ್ಟಗೊಳಿಸಬೇಕೆಂದು ಮಾಜಿ ಶಾಸಕ ತಿಪ್ಪೇಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಪೂರಕವಾಗಿ ಕಾರ್ಯಕರ್ತರು ಸಂಘಟಿತರಾಗಬೇಕು. ಕ್ಷೇತ್ರದಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡುವ ಮೂಲಕ ಪಕ್ಷವನ್ನು ಬಲಿಷ್ಟಗೊಳಿಸಬೇಕೆಂದು ಮಾಜಿ ಶಾಸಕ ತಿಪ್ಪೇಸ್ವಾಮಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬಿಜೆಪಿ ಮಂಡಲದಿಂದ ಏರ್ಪಡಿಸಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹತ್ತಿರವಾಗುತ್ತಿದೆ. ಕಾರ್ಯಕರ್ತರು ಸಂಘಟಿತರಾಗಬೇಕು. ಪ್ರತಿ ಮನೆಗೂ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳನ್ನು ತಿಳಿಸುವ ಮೂಲಕ ಪಕ್ಷವನ್ನು ಬಲವರ್ಧನೆ ಮಾಡಬೇಕು. ಬೂತ್ ಮಟ್ಟದಲ್ಲಿ ಸದಸ್ಯತ್ವ ಹೆಚ್ಚು ಮಾಡಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಬಲಗೊಳಿಸಬೇಕೆಂದು ಕರೆ ನೀಡಿದರು.

ಮಂಡಲ ಅಧ್ಯಕ್ಷ ಡಾ. ಪಿ.ಎಂ. ಮಂಜುನಾಥ್ ಮಾತನಾಡಿ ಕ್ಷೇತ್ರದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಕೆಲ ಕಾರಣಗಳಿಂದಾಗಿ ಪಕ್ಷ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಕಾರ್ಯಕರ್ತರು ಜಾಗೃತರಾಗಬೇಕು. ಪಕ್ಷದ ಸದಸ್ಯತ್ವ ಹೆಚ್ಚು ಮಾಡುವತ್ತ ಮುಂದಾಗಬೇಕು. ಪಕ್ಷ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದೆ. ಅಭಿಯಾನ ಎರಡು ಹಂತಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.

ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ನಡೆಯುವ ಸದಸ್ಯತ್ವ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಸಜ್ಜಾಗಬೇಕು. ಅಸಡ್ಡೆ ತೋರದೆ ಪ್ರತಿ ಭೂತುಗಳಲ್ಲಿ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.

ಈ ವೇಳೆ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಸಿದ್ದಣ್ಣ, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸಪ್ಪ, ಜಿಲ್ಲಾ ಎಸ್. ಟಿ ಮೋರ್ಚಾ ಅಧ್ಯಕ್ಷ ನಾಯಕನಹಟ್ಟಿ ಶಿವಣ್ಣ, ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷ ರಾಮರೆಡ್ಡಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ, ಎಸ್ಸಿ ಮೋರ್ಚ ಅಧ್ಯಕ್ಷ ಸಿದ್ದಾರ್ಥ, ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಕ್ಷ್ಮಣ, ಟಿ.ಟಿ ರವಿಕುಮಾರ್, ಸದಸ್ಯರಾದ ಮಂಜಣ್ಣ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ