ಚಾಮರಾಜನಗರದಲ್ಲಿ ಮೊಂಬತ್ತಿ ಮೆರವಣಿಗೆ

KannadaprabhaNewsNetwork | Published : Mar 13, 2024 2:04 AM

ಸಾರಾಂಶ

ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿ. ಆರ್. ಧ್ರುವನಾರಾಯಣ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿ. ಆರ್. ಧ್ರುವನಾರಾಯಣ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಿಂದ ಎಂಎಸ್‌ಐಎಲ್ ಅಧ್ಯಕ್ಷರು, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಕಾಡಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಮರಿಸ್ವಾಮಿ ಅವರ ನೇತೃತ್ವದಲ್ಲಿ ಮೊಂಬತ್ತಿ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಡಿವಿಯೇಷ‌ರ್ ರಸ್ತೆ, ಸತ್ತಿರಸ್ತೆ ಮೂಲಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತೆರಳಿ ಧ್ರುವನಾರಾಯಣ್‌ ಭಾವಚಿತ್ರದ ಬಳಿ ಮೊಂಬತ್ತಿ ಇಟ್ಟು ನಮಿಸುವ ಮೂಲಕ ಗೌರವ ಸೂಚಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮರೆಯಲಾಗದ ದಿವ್ಯಚೇತನ ಆ‌ರ್.ಧ್ರುವನಾರಾಯಣ್ ನಾ ಕಂಡ ಧ್ರುವತಾರೆ ಕಿರುಚಿತ್ರ ಪ್ರದರ್ಶನ ವೀಕ್ಷಿಸಿದ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ, ಕಾಡಾಧ್ಯಕ್ಷ ಪಿ. ಮರಿಸ್ವಾಮಿ ಹಾಗೂ ಮುಖಂಡರು ಭಾವುಕರಾದರು. ನಂತರ ಧ್ರುವನಾರಾಯಣ್‌ ರವರನ್ನು ಗುಣಗಾನ ಮಾಡಿದರು. ನಾ ಕಂಡ ಧ್ರುವತಾರೆ ಕಿರುಚಿತ್ರ ಪ್ರದರ್ಶನ ವೀಕ್ಷಿಸಿದ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಆರ್.ಧ್ರುವನಾರಾಯಣ್ ಪಕ್ಷ ನಿಷ್ಠೆಯುಳ್ಳವರಾಗಿದ್ದು, ಕಾರ್ಯಕರ್ತರ ಬಗ್ಗೆ ಅಪಾರ ಕಾಳಜಿವಹಿಸಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಇವರ ನಾಯಕರೊಂದಿಗೆ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದರು. ಅವರ ಪರಿಶ್ರಮದಿಂದ ರಾಜ್ಯದಲಿ ಕಾಂಗ್ರೆಸ್ ಸದೃಢವಾಗಿ ಅಧಿಕಾರ ಕಾರಣಕರ್ತರಾಗಿದ್ದಾರೆ ಎಂದು ಸ್ಮರಿಸಿದರು. ಅವರ ಕುಟುಂಬಕ್ಕೆ ಒಳ್ಳೆಯದಾಗಲಿ, ದುಃಖ ಭರಿಸುವ ಶಕ್ತಿ ನೀಡಲಿ ಎಂದರು.ಮೆರವಣಿಗೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಆರ್.ಮಹದೇವು, ಜಿಲ್ಲಾ ವಕ್ತಾರ ನವೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಕರ್, ಅರಕಲವಾಡಿ ಗುರುಸ್ವಾಮಿ, ಮಾಜಿ ಚೂಡಾಧ್ಯಕ್ಷ ಸೈಯದ್‌ ರಫೀ, ಹೊಂಗನೂರು ಚಂದ್ರು, ಜಿಪಂ ಮಾಜಿ ಸದಸ್ಯ ರಮೇಶ್, ನಗರಸಭಾ ಸದಸ್ಯ ಚಿನ್ನಮ್ಮ, ಮಾಜಿ ಸದಸ್ಯ ಪದ್ಮ ಪುರುಷೋತ್ತಮ್, ಆ‌ರ್.ಪಿ. ನಂಜುಂಡಸ್ವಾಮಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹೊಸಹಳ್ಳಿ ಮಧುಸೂದನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್‌ ನಗು, ಸಾಮಾಜಿಕ ಜಾಲತಾಣದ ಮಸಾಯಿಚ್, ಬೂದಿತಿಟ್ಟು ಲಿಂಗರಾಜು ಅಕ್ಷಯ್, ಸ್ವಾಮಿ, ಮಹೇಶ್, ದೊರೆ, ಮತ್ತು ರಾಮು ಇತರರು ಭಾಗವಹಿಸಿದ್ದರು.

Share this article