ಕನ್ನಡಪ್ರಭ ವಾರ್ತೆ ಬೆಳಗಾವಿಕಳೆದೆರಡು ದಿನಗಳಿಂದ ಹಣ ಹಂಚುವುದು ಬಿಟ್ಟರೇ ಮತದಾರರನ್ನು ಮನಮೊಲಿಸುವ ಕೆಲಸ ಮಾಡಲಿಲ್ಲ. ಹಣದ ಹಂಚಿಕೆ ಮೇಲೆಯೇ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಆದರೆ, ಜನ ಅವರನ್ನು ತಿರಸ್ಕರಿಸಿ ಸರಿಯಾದ ಉತ್ತರ ಕೊಡುತ್ತಾರೆ. ಹಣ ಮತ್ತು ಅಧಿಕಾರದ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
ಕಳೆದ ಒಂದು ತಿಂಗಳಿಂದ ಬೆಳಗಾವಿಯಲ್ಲಿ ಪ್ರಚಾರ ಮಾಡುತ್ತಿದ್ದೇನೆ. ನಮಗೆ ದಿನದಿಂದ ದಿನಕ್ಕೆ ಬೆಂಬಲ ಹೆಚ್ಚಾಗುತ್ತದೆ. ಅಲ್ಲದೇ ಮೋದಿ 3ನೇ ಬಾರಿ ಪ್ರಧಾನಿ ಆಗಬೇಕೆನ್ನುವ ಜನರ ಇಚ್ಛೆಯಿಂದ ಮತ್ತಷ್ಟು ಜನ ಸ್ಫೂರ್ತಿಗೊಳ್ಳುತ್ತಿದ್ದಾರೆ. ಹಾಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಜನ ಆಗಮಿಸುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ. ಹಾಗಾಗಿ ಬೇಗ ಬೇಗನೇ ಆಗಮಿಸಿ ಮತ ಚಲಾಯಿಸುವಂತೆ ಮನವಿ ಮಾಡಿದರು.
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಆಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಯಿಸಿ, ಆ ರೀತಿ ಆರೋಪ ಕೇಳಿ ಬಂದಿದೆ. ಡಿಕೆಶಿ ಅದನ್ನು ಅಲ್ಲಗಳೆದಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಡಿಕೆಶಿ ಹೆಸರು ಮೊದಲಿನಿಂದಲೂ ಕೇಳಿ ಬರುತ್ತಿದೆ. ಹಾಗಾಗಿ, ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವುದಿಲ್ಲ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.ಈ ಚುನಾವಣೆಗೂ ಪ್ರಜ್ವಲ್ ರೇವಣ್ಣ ಪ್ರಕರಣ ಮತ್ತು ಡಿಕೆಶಿ ಆಡಿಯೋ ವೈರಲ್ ವಿಚಾರಗಳಿಗೂ ಯಾವುದೇ ರೀತಿ ಸಂಬಂಧವಿಲ್ಲ, ಪರಿಣಾಮವೂ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂಸದೆ ಮಂಗಲ ಅಂಗಡಿ ಮಾತನಾಡಿ, ಎಲ್ಲ ಕಡೆ ಮತದಾನ ಚೆನ್ನಾಗಿ ನಡೆಯುತ್ತಿದ್ದು, ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆ 6.30 ಗಂಟೆಗೆ ಜನ ಸರದಿ ಸಾಲಿನಲ್ಲಿ ನಿಂತಿದ್ದರೆಂದು ಕಾರ್ಯಕರ್ತರು ಮಾಹಿತಿ ನೀಡಿದರು ಎಂದು ತಿಳಿಸಿದರು.ಶ್ರದ್ಧಾ ಶೆಟ್ಟರ್ ಮಾತನಾಡಿದರು.ಬಾಕ್ಸ್...
ಮೊದಲ ಬಾರಿ ಬೆಳಗಾವಿಯಲ್ಲಿ ಮತ ಚಲಾಯಿಸಿದ ಶೆಟ್ಟರ್ಇನ್ನೂ ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಇದೇ ಮೊದಲ ಬಾರಿ ಬೆಳಗಾವಿಯಲ್ಲಿ ಮತ ಚಲಾಯಿಸಿದರು. ತಮ್ಮ ಮತದಾನದ ಹಕ್ಕು ಬಂದ ಮೇಲೆ ತವರು ಕ್ಷೇತ್ರ ಹುಬ್ಬಳ್ಳಿಯಲ್ಲಿ ಜಗದೀಶ ಶೆಟ್ಟರ್ ಮತ ಹಾಕುತ್ತಿದ್ದರು. ಆದರೆ, ಬೆಳಗಾವಿ ಅಭ್ಯರ್ಥಿಯಾದ ಬಳಿಕ ತಮ್ಮ ಮತವನ್ನು ಹುಬ್ಬಳ್ಳಿಯಿಂದ ಬೆಳಗಾವಿಗೆ ವರ್ಗಾಯಿಸಿಕೊಂಡು ಮತದಾನ ಮಾಡಿದ್ದು ವಿಶೇಷವಾಗಿತ್ತು.
------------ಕೋಟ್...ಕಾಂಗ್ರೆಸ್ ತಮ್ಮ ಸಾಧನೆ ಮತ್ತು ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಿಳಿಸಬೇಕಿತ್ತು. ಆದರೆ, ಸೋಲಿನ ಭೀತಿ ಮತ್ತು ಹತಾಸೆಯಿಂದ ಹಣ ಹಂಚಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಒಂದು ದೂರು ಕೊಟ್ಟಿದ್ದೇವೆ. ಸಂಬಂಧಿಸಿದ ಅಧಿಕಾರಿಗಳ ಗಂಭೀರ ಕ್ರಮ ತೆಗೆದುಕೊಳ್ಳಬೇಕಿದೆ.-ಜಗದೀಶ ಶೆಟ್ಟರ್, ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ.---------------------------
ನಮ್ಮ ಯಜಮಾನರು ಮಾಡಿರುವ ಅಭಿವೃದ್ಧಿ ಕೆಲಸಗಳು ಮತ್ತು 2 ಬಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಗದೀಶ ಶೆಟ್ಟರ್ ಅವರು ಬೆಳಗಾವಿಯಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹಾಗಾಗಿ, ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ.-ಮಂಗಲ ಅಂಗಡಿ, ಸಂಸದೆ.---------------------------
ಇಡೀ ಕ್ಷೇತ್ರದಲ್ಲಿ ಬಿಜೆಪಿಗೆ ಉತ್ತಮ ಸ್ಪಂದನೆಯಿದೆ. ಎಲ್ಲ ಚುನಾವಣೆಗಳನ್ನು ಹಣದ ಮೇಲೆ ಗೆಲ್ಲಲು ಆಗುವುದಿಲ್ಲ. ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಇಡೀ ದೇಶದ ಜನರ ಬಯಕೆಯಿದೆ. ನಾವೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಇವೆಲ್ಲ ವರ್ಕೌಟ್ ಆಗಲಿವೆ.-ಶ್ರದ್ಧಾ ಶೆಟ್ಟರ್, ಜಗದೀಶ ಶೆಟ್ಟರ್ ಸೊಸೆ.----------------------------