(ಮಿಡ್ಲ್‌) * ಸೈದಾಪುರದಲ್ಲಿ ಇ-ಕೆವೈಸಿ ಹೆಸರಲ್ಲಿ ಹಣ ವಸೂಲಿ

KannadaprabhaNewsNetwork |  
Published : Aug 20, 2026, 01:15 AM IST
ಸೈದಾಪುರ ಪಟ್ಟಣದಲ್ಲಿರುವ ನಾಗರಿಕ ಸೇವಾ ಕೇಂದ್ರಗಳಲ್ಲಿ ಪರೀಶೀಲನೆ ಮಾಡಿದ ಆಹಾರ ಇಲಾಖೆಯ ಅಧಿಕಾರಿಗಳು | Kannada Prabha

ಸಾರಾಂಶ

ಸರ್ಕಾರವು ನಕಲಿ ಹಾಗೂ ಅನರ್ಹ ಪಡಿತರ ಚೀಟಿದಾರರನ್ನು ಗುರುತಿಸಿ ತೆಗೆದುಹಾಕುವ ಉದ್ದೇಶದಿಂದ ಪಡಿತರ ಚೀಟಿದಾರರಿಗೆ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಇ-ಕೆವೈಸಿ ಸೆ-30ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸೂಚಿಸಿದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಪಟ್ಟಣದ ಕೆಲವು ನಾಗರಿಕ ಸೇವಾ ಕೇಂದ್ರಗಳು ಹಾಗೂ ಆನ್‌ಲೈನ್‌ ಕೇಂದ್ರಗಳಲ್ಲಿ ಇ-ಕೆವೈಸಿ ಹೆಸರಿನಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

- ಪಡಿತರ ಚೀಟಿಗೆ ಬಡವರಿಂದ ₹200ರಿಂದ ₹300 ಹೆಚ್ಚುವರಿ ಹಣ ವಸೂಲಿ ಆರೋಪ

ದೇವಪ್ಪ ವಡವಟ್‌

ಕನ್ನಡಪ್ರಭ ವಾರ್ತೆ ಸೈದಾಪುರ

ಸರ್ಕಾರವು ನಕಲಿ ಹಾಗೂ ಅನರ್ಹ ಪಡಿತರ ಚೀಟಿದಾರರನ್ನು ಗುರುತಿಸಿ ತೆಗೆದುಹಾಕುವ ಉದ್ದೇಶದಿಂದ ಪಡಿತರ ಚೀಟಿದಾರರಿಗೆ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಇ-ಕೆವೈಸಿ ಸೆ-30ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸೂಚಿಸಿದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಪಟ್ಟಣದ ಕೆಲವು ನಾಗರಿಕ ಸೇವಾ ಕೇಂದ್ರಗಳು ಹಾಗೂ ಆನ್‌ಲೈನ್‌ ಕೇಂದ್ರಗಳಲ್ಲಿ ಇ-ಕೆವೈಸಿ ಹೆಸರಿನಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

* ಒಂದು ಪಡಿತರ ಚೀಟಿಗೆ ₹200ರಿಂದ ₹300ರ ಸಾರ್ವಜನಿಕರಿಂದ ವಸೂಲಿ:

ಪಟ್ಟಣದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಕಾರ್ಯ ಆರಂಭ ಮಾಡದಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಜನರು ಪಟ್ಟಣದ ಖಾಸಗಿ ಸೇವಾ ಕೇಂದ್ರಗಳ ಕಡೆ ಮುಖ ಮಾಡಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರಗಳು ದಿನವಿಡಿ ಕಾಯಿಸಿ ಒಂದು ಪಡಿತರ ಚೀಟಿಗೆ ₹200ರಿಂದ ₹300ರೂ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಬಡ ಹಾಗೂ ಕೂಲಿ ಕಾರ್ಮಿಕರು ಅನಗತ್ಯ ಆರ್ಥಿಕ ಹೊರೆಯನ್ನು ಎದುರಿಸುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

* ಇ-ಕೆವೈಸಿ ಪ್ರಕ್ರಿಯೆ ಕಾರ್ಯ ಆರಂಭ ಮಾಡದ ನ್ಯಾಯಬೆಲೆ ಅಂಗಡಿ:

ಸರ್ಕಾರದ ನಿಯಮದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುವ ಇ-ಕೆವೈಸಿ ಪ್ರಕ್ರಿಯೆ ಉಚಿತವಾಗಿರಬೇಕಾದರೆ, ಅವರು ವಿವಿಧ ಕಾರಣಗಳನ್ನು ನೀಡಿ ಮುಂದುಡುತ್ತಿದ್ದಾರೆ. ಅಲ್ಲದೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಚೀಟಿ ಬಂದ್ ಆಗುತ್ತವೆ ಎಂಬ ವದಂತಿಗೆ ಆತಂಕಗೊಂಡ ಜನರು ಖಾಸಗಿ ಕೇಂದ್ರದಲ್ಲಿ ದುಡ್ಡು ಎಷ್ಟಾದರೂ ಹೋಗಲಿ ಎಂದು ಹೆಚ್ಚುವರಿ ಹಣ ನೀಡಿ ಇ - ಕೆವೈಸಿ ಮಾಡಿಸುತ್ತಿದ್ದಾರೆ.

ಇ-ಕೆವೈಸಿ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಾಗ ಆಹಾರ ಇಲಾಖೆ ಅಧಿಕಾರಿಗಳು ನಾಗರಿಕ ಸೇವಾ ಕೇಂದ್ರಗಳಿಗೆ ಹಾಗೂ ಅವರು ಪಡಿತರ ಅಕ್ಕಿಯನ್ನು ಸಂಗ್ರಹಿಸಿದ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಆದರೆ ಪರಿಶೀಲನೆ ಕಾಟಾಚಾರಕ್ಕೆ ಸೀಮಿತವಾಗಿದ್ದು, ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವವರ ವಿರುದ್ಧ ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳು ಕೂಡ ಈ ದಂಧೆಯಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂಬ ಆರೋಪವೂ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ದಂಧೆಯಲ್ಲಿ ತೊಡಗಿದ್ದ ತಪ್ಪಿಸ್ಥರ ವಿರುದ್ಧ ಹಾಗೂ ಖಾಸಗಿ ಕೇಂದ್ರಗಳಿಗೆ ಅವಕಾಶ ಕಲ್ಪಿಸಿಕೊಟ್ಟ ನ್ಯಾಯ ಬೆಲೆ ಅಂಗಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಇ-ಕೆವೈಸಿ ಹೆಸರಿನಲ್ಲಿ ನಿಗದಿತ ನಿಯಮ ಉಲ್ಲಂಘಿಸಿ ಹಣ ವಸೂಲಿ ಮಾಡುತ್ತಿರುವ ಕೇಂದ್ರಗಳ ವಿರುದ್ಧ ಆಹಾರ ಇಲಾಖೆ ಅಧಿಕಾರಿಗಳ ತಪಾಸಣೆ ಮತ್ತು ಕ್ರಮದ ಬಗ್ಗೆ ಪಾರದರ್ಶಕತೆ ಇರಬೇಕು ಹಾಗೂ ಸಮಗ್ರ ಪರಿಶೀಲನೆ ನಡೆಸಬೇಕು. ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಂಡು, ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಆಗದಂತೆ ಸ್ಪಷ್ಟ ಸೂಚನೆ ನೀಡಬೇಕು. ಅಧಿಕೃತ ಶುಲ್ಕ, ಉಚಿತ ಸೇವೆ ಹಾಗೂ ದೂರು ಸಲ್ಲಿಸುವ ವ್ಯವಸ್ಥೆಯ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಬಡವರ ಸಂಕಷ್ಟವನ್ನು ದುರುಪಯೋಗಪಡಿಸಿಕೊಂಡು ಹಣ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

* ರಾತ್ರೋರಾತ್ರಿ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ:

ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ಹೋದರು ಕೂಡ ಸೇವಾ ಕೇಂದ್ರಗಳಲ್ಲಿ ತಡರಾತ್ರಿಯವರೆಗೂ ಕದ್ದುಮುಚ್ಚಿ ಇ-ಕೆವೈಸಿ ಮಾಡಿ ಸಾರ್ವಜನಿಕರಿಂದ ದುಬಾರಿ ಹಣ ವಸೂಲಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳದಿರುವುದು ಮೂಲ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

-

ಕೋಟ್‌-1 : ಬಡಜನರ ಅಜ್ಞಾನ ಹಾಗೂ ಅನಿವಾರ್ಯತೆಯನ್ನು ದುರುಪಯೋಗಪಡಿಸಿಕೊಂಡು ಹಣ ವಸೂಲಿ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು. ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಪಾರದರ್ಶಕ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ.

- ಸಾಗರ ಹುಲ್ಲೇರ್ , ಕ್ಯಾತ್ನಾಳ್.

-

ಕೋಟ್-2 :

ಇ-ಕೆವೈಸಿ ಪ್ರಕ್ರಿಯೆ ನ್ಯಾಯ ಬೆಲೆ ಅಂಗಡಿಯಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದು ಈಗಾಗಲೇ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ. ಆದರೂ ಸೇವಾ ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳ ಬಂದಿರುವುದರಿಂದ ನಮ್ಮ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. : ಸೋಮಶೇಖರ ಬಿರಾದಾರ, ಉಪನಿರ್ದೇಶಕರು ಜಿಲ್ಲಾ ಆಹಾರ ನಾಗರಿಕ ಸರಬರಾಜು ಇಲಾಖೆ, ಯಾದಗಿರಿ.

-

19ವೈಡಿಆರ್‌6 : ಸೈದಾಪುರ ಪಟ್ಟಣದಲ್ಲಿರುವ ನಾಗರಿಕ ಸೇವಾ ಕೇಂದ್ರಗಳಲ್ಲಿ ಪರೀಶೀಲನೆ ಮಾಡಿದ ಆಹಾರ ಇಲಾಖೆಯ ಅಧಿಕಾರಿಗಳು

---000---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಚಾರ ನಿಯಮ ಭಂಜಕರಿಗೆ ಕಾದಿದೆ ಭಾರಿ ದಂಡ!
ಫಾರ್ಮರ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ರೋಗಿಗಳಿಗೆ ವರದಾನ: ನಂಜಾವಧೂತ ಶ್ರೀ