ಚುನಾವಣೆ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾವಹಿಸಿ: ಎ.ಸುರೇಶ್

KannadaprabhaNewsNetwork |  
Published : Mar 30, 2024, 12:52 AM IST
ಚಿತ್ರ : 29ಎಂಡಿಕೆ1 : ಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಯಿತು.  | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಯಿತು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ. ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಮಾಡುವ ಖರ್ಚುವೆಚ್ಚದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ವೆಚ್ಚ ವೀಕ್ಷಕ ಎ.ಸುರೇಶ್ ಸೂಚಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಸಿ ಅವರು ಮಾತನಾಡಿದರು.ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ. ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು.

ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸಬೇಕು. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ಗಮನಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ಹೇಳಿದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು/ ಸಿಬ್ಬಂದಿ ಸಮನ್ವಯ ಮತ್ತು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದರು.* ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ವಹಿಸಿ:

ಬ್ಯಾಂಕ್ ಖಾತೆಗಳಲ್ಲಿ ನಡೆಯುವ ವಹಿವಾಟು ಬಗ್ಗೆ ಗಮನಹರಿಸಬೇಕು. ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕ ಎ.ಸುರೇಶ್‌ ಹೇಳಿದರು.ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಜ್ಯ ಗಡಿ ಚೆಕ್ ಪೋಸ್ಟ್‌ಗಳ ಕಾರ್ಯ ಚಟುವಟಿಕೆ ಮತ್ತಿತರ ಬಗ್ಗೆ ವಿವರಿಸಿದರು.ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಲೋಕಸಭಾ ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು.ಬಳಿಕ ಚುನಾವಣಾ ವೆಚ್ಚ ವೀಕ್ಷಕರು, ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿಚಾರಕರ ಕೋಶ ಹಾಗೂ ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಉಸ್ತುವಾರಿ ಸಮಿತಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ನಾರಾಯಣಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಂಗೆ ಸಿಎಂ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ಅಪಮಾನ ಮಾಡಿದಂತೆ
ಮೀಸಲು ವರ್ಗೀಕರಣದ ವಿರುದ್ಧ ಇಂದು ಬೆಳಗಾವಿ ಚಲೋ