ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೋಣಸಾಲೆ ಗ್ರಾಮದಲ್ಲಿ ಶನಿವಾರ ರೈತಪರ ಹೋರಾಟಗಾರ ದಿ.ಕೋಣಸಾಲೆ ನರಸರಾಜು ಅವರ 7ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ರೈತರ ಸಮಸ್ಯೆಗಳಿಗೆ ಕೀರ್ತಿ ಶೇಷರಾಗಿರುವ ವಿ.ಅಶೋಕ್ ಹಾಗೂ ಕೋಣಸಾಲೆ ನರಸರಾಜು ಒಗ್ಗೂಡಿ ಹೋರಾಟ ನಡೆಸುವ ಮೂಲಕ ಸಮಸ್ಯೆಗೆ ಪರಿಹಾರದ ಜೊತೆಗೆ ರೈತ ಚಳವಳಿಗೆ ಶಕ್ತಿ ತುಂಬಿದ್ದರು ಎಂದರು.
ಕಬ್ಬಿನ ಬಾಕಿ ಪಾವತಿ ಕುರಿತಂತೆ ಸಕ್ಕರೆ ಕಾರ್ಖಾನೆಗಳಿಗೆ ಚಳವಳಿ ಮೂಲಕ ಚಾಟಿ ಏಟು ನೀಡುತ್ತಿದ್ದ ಕೋಣಸಾಲೆ ನರಸರಾಜು ವಿದ್ಯುತ್ ಸಮಸ್ಯೆ, ರೇಷ್ಮೆ ಬೆಳೆಗೆ ಸೂಕ್ತ ಬೆಂಬಲ ಬೆಲೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ವಿಚಾರದಲ್ಲಿ ರೈತ ಸಂಘಗಳನ್ನು ಒಗ್ಗೂಡಿಸಿಕೊಂಡು ತಮ್ಮದೇ ಆದ ರೀತಿಯಲ್ಲಿ ಹೋರಾಟ ನಡೆಸಿದ ನಿದರ್ಶನಗಳು ಸಾಕಷ್ಟಿವೆ ಎಂದರು.ರೈತ ಪರ ಸಂಘಟನೆಗಳು ಇನ್ನು ಮುಂದಾದರೂ ಒಂದೇ ವೇದಿಕೆಯಲ್ಲಿ ಬಂದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಚಿಂತನೆ ನಡೆಸಬೇಕು. ಗ್ರಾಮೀಣ ಭಾಗದ ಯುವ ರೈತರನ್ನು ಹೆಚ್ಚು ಹೆಚ್ಚಾಗಿ ಸಂಘಟಿಸುವ ಮೂಲಕ ಮುಂದಿನ ದಿನಗಳಲ್ಲಿ ರೈತ ಸಂಘಗಳಿಗೆ ಶಕ್ತಿ ನೀಡಿ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಲು ಅಣಿಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.