ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಕೊಂಚ ಚುರುಕುಗೊಂಡಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.ಜೂನ್ ತಿಂಗಳಲ್ಲಿ ಕಳೆದ ಹಲವು ದಿನಗಳಿಂದ ವಾಡಿಕೆಯಷ್ಟು ಮಳೆಯಾಗಿಲ್ಲ. ಇದರಿಂದ ರೈತಾಪಿ ವರ್ಗ ಉತ್ತಮ ಮಳೆಗಾಗಿ ಎದುರು ನೋಡುತ್ತಿದ್ದರು. ಜಿಲ್ಲೆಯಲ್ಲಿ ಭತ್ತ ಹಾಗೂ ಮುಸುಕಿನ ಜೋಳ ಕೃಷಿ ಮಾಡಲು ಇದು ಸಕಾಲವಾಗಿದ್ದು, ಮಳೆಯ ಅನಿವಾರ್ಯತೆ ಎದುರಾಗಿದೆ. ಇದೀಗ ಮಳೆ ಉತ್ತಮವಾಗಿ ಸುರಿಯತೊಡಗಿರುವುದರಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ.
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಳೆಗಳಲ್ಲಿ ಮಳೆ ಬಿಡುವು ನೀಡಿ ಸುರಿಯಿತು.ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 22.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.68 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ 22.95 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ 44.25 ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ 22.75 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ 18.55 ಮಿ.ಮೀ., ಕುಶಾಲನಗರ ತಾಲೂಕಿನಲ್ಲಿ 4 ಮಿ.ಮೀ. ಮಳೆಯಾಗಿದೆ.ಹೋಬಳಿ ವಿವರ: ಮಡಿಕೇರಿ ಕಸಬಾ 25.40, ನಾಪೋಕ್ಲು 9.60, ಸಂಪಾಜೆ 13, ಭಾಗಮಂಡಲ 43.80, ವಿರಾಜಪೇಟೆ 38.50, ಅಮ್ಮತ್ತಿ 50, ಹುದಿಕೇರಿ 22.90, ಶ್ರೀಮಂಗಲ 23, ಪೊನ್ನಂಪೇಟೆ 27, ಬಾಳೆಲೆ 18.09, ಸೋಮವಾರಪೇಟೆ ಕಸಬಾ 15.60, ಶನಿವಾರಸಂತೆ 1, ಶಾಂತಳ್ಳಿ 42, ಕೊಡ್ಲಿಪೇಟೆ 15.60, ಕುಶಾಲನಗರ 3, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.............
ಹಾರಂಗಿ ಜಲಾಶಯದ ನೀರಿನ ಮಟ್ಟಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2829.63 ಅಡಿಗಳು. ಕಳೆದ ವರ್ಷ ಇದೇ ದಿನ 2819.59 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.60 ಮಿ.ಮೀ., ಕಳೆದ ವರ್ಷ ಇದೇ ದಿನ 3.80 ಮಿ.ಮೀ., ಇಂದಿನ ನೀರಿನ ಒಳಹರಿವು 514 ಕ್ಯುಸೆಕ್, ಕಳೆದ ವರ್ಷ ಇದೇ ದಿನ 336 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.