ತಿಂಗಳ ಪೂರ್ತಿ ಸಂವಿಧಾನ ಜಾಗೃತಿ ಜಾಥಾ

KannadaprabhaNewsNetwork |  
Published : Feb 05, 2024, 01:46 AM IST
ಫೋಟೋ : 2 ಹೆಚ್‌ಎಸ್‌ಕೆ 1 ಹೊಸಕೋಟೆ ತಾಲೂಕಿನ ಸಮೇತನಹಳ್ಳಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಕೊರಳೂರು ಶ್ರೀನಿವಾಸ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಜಗತ್ತಿನಲ್ಲೇ ಶ್ರೇಷ್ಠವಾದ ಭಾರತದ ಸಂವಿಧಾನ ರಚನೆಯಾಗಿ 75 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಪ್ರಶಂಸನೀಯ ಎಂದು ಕರ್ನಾಟಕ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಕೊರಳೂರು ಶ್ರೀನಿವಾಸ್ ತಿಳಿಸಿದರು.

ಹೊಸಕೋಟೆ: ಜಗತ್ತಿನಲ್ಲೇ ಶ್ರೇಷ್ಠವಾದ ಭಾರತದ ಸಂವಿಧಾನ ರಚನೆಯಾಗಿ 75 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಪ್ರಶಂಸನೀಯ ಎಂದು ಕರ್ನಾಟಕ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಕೊರಳೂರು ಶ್ರೀನಿವಾಸ್ ತಿಳಿಸಿದರು.

ತಾಲೂಕಿನ ಸಮೇತನಹಳ್ಳಿಯಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಮಹತ್ವ ಹಾಗೂ ಹಕ್ಕುಗಳ ಕುರಿತಂತೆ ನಾಗರಿಕರು ಮಹಿಳೆಯರು ಯುವ ಜನರಿಗೆ ಜಾಗೃತಿ ಮೂಡಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಿಯುವುದೇ ಜಾಥಾ ಉದ್ದೇಶ. ಸಂವಿಧಾನ ಜಾಗೃತಿ ಜಾಥದಲ್ಲಿ ಸಂವಿಧಾನ ಪೀಠಿಕೆಯ ಮುದ್ರಿತ ಪ್ರತಿಗಳ ವಿತರಣೆ, ಬಸವಣ್ಣನವರ ಸಂದೇಶ ಹಾಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ತಜ್ಞರಿಂದ ಭಾಷಣ, ಜಾನಪದ ನೃತ್ಯ ಪ್ರದರ್ಶನ ನೀಡಲಾಗುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷ ಕಾಂತರಾಜು ಮಾತನಾಡಿ, ದೇಶದೆಲ್ಲೆಡೆ ಮೇಲು ಕೀಳು ಜಾತಿ ಪದ್ಧತಿ ಹೋಗಲಾಡಿಸಲು ಅಂಬೇಡ್ಕರ್ ಅತ್ಯುತ್ತಮ ಸಂವಿಧಾನ ರಚಿಸಿದರು. ಸಂವಿಧಾನದ ಧ್ಯೇಯದಡಿ ನಾವು ಬದುಕುತ್ತಿದ್ದು ಅದರ ಮಹತ್ವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಷ್ಟೇ ಜವಾಬ್ದಾರಿಯಾಗಿದೆ ಎಂದರು.

ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸಿದ್ದರಾಜು, ತಾಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಿನ್ನಸ್ವಾಮಿ, ಗ್ರಾಪಂ ಉಪಾಧ್ಯಕ್ಷ ಸುಧಾರಾಣಿ, ಪಿಡಿಒ ಪ್ರಸಾದ್ ಸೇರಿದಂತೆ ಹಲವಾರು ದಲಿತ ಪರ ಸಂಘಟನೆಗಳ ಮುಖಂಡರು ಹಾಜರಿದ್ದರು.ಫೋಟೋ : 2 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷ ಕಾಂತರಾಜು, ಕರ್ನಾಟಕ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಕೊರಳೂರು ಶ್ರೀನಿವಾಸ್ ಉದ್ಘಾಟಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ