ಜಿಲ್ಲೆಯಲ್ಲಿ ತಿಂಗಳ ಕಾಲ ಜಾಬ್ ಕಾರ್ಡ್ ಮೇಳ

KannadaprabhaNewsNetwork |  
Published : Aug 21, 2026, 03:45 AM IST
 | Kannada Prabha

ಸಾರಾಂಶ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಿಗೆ ನೂತನವಾಗಿ ಜಾರಿಗೆ ಬಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಆಂಡ್ ಅಜೀವಿಕ್ ಮಿಷನ್ ಗ್ರಾಮೀಣ -2026 ಯೋಜನೆಯಡಿ ಜಿಲ್ಲೆಯಾದ್ಯಂತ ಆ. 15 ರಿಂದ ಸೆ.15 ರ ವರೆಗೆ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ ಎಂದು ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

ಮಡಿಕೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಿಗೆ ನೂತನವಾಗಿ ಜಾರಿಗೆ ಬಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಆಂಡ್ ಅಜೀವಿಕ್ ಮಿಷನ್ ಗ್ರಾಮೀಣ -2026 ಯೋಜನೆಯಡಿ ಜಿಲ್ಲೆಯಾದ್ಯಂತ ಆ. 15 ರಿಂದ ಸೆ.15 ರ ವರೆಗೆ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ ಎಂದು ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ. ಜಿಲ್ಲೆಯ 102 ಗ್ರಾ.ಪಂ.ಗಳಲ್ಲಿ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ಸಮುದಾಯ ಆಧಾರಿತ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ವೈಯಕ್ತಿಕ ಬಾವಿ, ದನದ ಕೊಟ್ಟಿಗೆ, ಕೋಳಿ ಶೆಡ್ ಸೇರಿದಂತೆ ಒಟ್ಟಾರೆ ೩೧೮ ಕಾಮಗಾರಿಗಳಿಗೆ ಅವಕಾಶವಿದೆ.ಹಿಂದಿನ ನರೇಗಾ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿತ್ತು. ನೂತನ ವಿಬಿ ಜಿ ರಾಮ್ ಜಿ ಯಲ್ಲಿ 125 ದಿನಗಳ ಉದ್ಯೋಗವನ್ನು ನೀಡಬಹುದಾಗಿದೆ.

ಈಗಾಗಲೇ ಗ್ರಾ.ಪಂ.ಗಳು ನಿಯಮಾನುಸಾರ ಕ್ರಿಯಾಯೋಜನೆ ಸಲ್ಲಿಸಿದ್ದು, ಅವುಗಳಿಗೆ ಅನುಮೋದನೆ ನೀಡಲಾಗಿದೆ. ಜಿಲ್ಲೆಯಲ್ಲಿಯೂ ವಿಬಿ ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿಗಳು ಆರಂಭಗೊಂಡಿದ್ದು, ಗ್ರಾಮೀಣ ಜನರಿಗೆ ದಿನವೊಂದಕ್ಕೆ ರೂ. 382 ಕೂಲಿ‌ ನಿಗದಿಪಡಿಸಲಾಗಿದೆ. ನಮೂನೆ-೬ ರಲ್ಲಿ ಕೆಲಸಕ್ಕೆ ಬೇಡಿಕೆ ಸಲ್ಲಿಸಿದಲ್ಲಿ 15ದಿನಗಳ ಒಳಗಾಗಿ ಗ್ರಾ.ಪಂ.ವತಿಯಿಂದ ಉದ್ಯೋಗ ಒದಗಿಸಲಾಗುತ್ತದೆ. ಕೊಡಗಿನ ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುವ ಸಲುವಾಗಿ 5 ತಾಲೂಕುಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ಜಾಬ್ ಕಾರ್ಡ್ ಪಡೆದುಕೊಳ್ಳಲು ಹಾಗೂ ಕಾಮಗಾರಿಗಳನ್ನು ಪಡೆಯಲು ಮತ್ತು ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಗ್ರಾಮೀಣ ಭಾಗದ ಜನರು ತಮ್ಮ ವ್ಯಾಪ್ತಿಯ ಗ್ರಾಮಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದರು.ಜಾಬ್ ಕಾರ್ಡ್ ಮೇಳದ ಅಂಗವಾಗಿ 20-08-2026 ರಂದು ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮ ಪಂಚಾಯಿತಿಯಲ್ಲಿ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಜಾಬ್‌ ಕಾರ್ಡ್‌ ಮೇಳ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ದೊರಕುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆದ್ದಾರಿ ಇಕ್ಕೆಲ 75 ಮೀ.ನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ: ಕೋಟ
ಯಕ್ಷಗಾನಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಡಾ. ತಲ್ಲೂರು