ಮೂಡುಬಿದಿರೆ ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳ ಕಾಶಿ: ಪಿಜಿಆರ್ ಸಿಂಧ್ಯಾ

KannadaprabhaNewsNetwork |  
Published : Jan 27, 2025, 12:47 AM IST
111 | Kannada Prabha

ಸಾರಾಂಶ

ಕಾರ್ಯಕ್ರಮದಲ್ಲಿ ಒಟ್ಟು ೧೩೯೨ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡರು. ನಂತರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಶಿಕ್ಷಣದ ಸ್ವರ್ಗವಾಗಿರುವ ಮೂಡುಬಿದಿರೆ, ಉತ್ಕೃಷ್ಟ ಮಟ್ಟದ ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳ ಕಾಶಿಯಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ನುಡಿದರು.

ಅವರು ಶನಿವಾರ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಜರುಗಿದ ಮೂರು ದಿನಗಳ ‘ಜಿಲ್ಲಾ ಮಟ್ಟದ ಕ್ಯಾಂಪೋರಿ’ ಕಾರ್ಯಕ್ರಮದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ, ರೋವರ್ಸ್ ಮತ್ತು ರೇಂಜರ್ಸ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಾವಿರಾರು ಜನರಿಗೆ ಬದುಕಿನ ಶಿಕ್ಷಣ ನೀಡುತ್ತಿರುವ ಡಾ.ಎಂ. ಮೋಹನ್ ಆಳ್ವರನ್ನು ವಿದ್ಯಾರ್ಥಿಗಳು ರೋಲ್ ಮಾಡೆಲ್ ಆಗಿ ಪರಿಗಣಿಸಬೇಕು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾನವ ನಿರ್ಮಾಣದ ಸಂಸ್ಥೆ. ಇಂತಹ ಶಿಬಿರದಲ್ಲಿ ಕಲಿತ ಜೀವನ ಶಿಕ್ಷಣ ಮುಂದಿನ ಸುಂದರ ಬದುಕಿಗೆ ಅಡಿಪಾಯವಾಗಬಲ್ಲದು. ಶಿಸ್ತು, ಸಮಯಪಾಲನೆ ಇಲ್ಲಿ ಕಲಿಯುವಂತಾಗಬೇಕು ಎಂದರು. ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್, ಜಿಲ್ಲಾ ಗೈಡ್ ಆಯುಕ್ತೆ ವಿಮಲಾ ರಂಗಯ್ಯ, ಜಿಲ್ಲಾ ಸಂಘಟನಾ ಆಯುಕ್ತೆ ಸುನೀತಾ, ಜಿಲ್ಲಾ ತರಬೇತಿ ಆಯುಕ್ತ ಶಾಂತಾರಾಮ ಪ್ರಭು, ಶಿಬಿರ ನಿರ್ದೇಶಕ ನಾರಾಯಣ್ ನಾಯಕ್, ಸ್ಕೌಟ್ ವಿಭಾಗದ ಪ್ರತೀಪ್, ಗೈಡ್ ಜಿಲ್ಲಾ ಸಂಘಟನಾ ಆಯುಕ್ತೆ ಸುನೀತಾ, ಗೈಡ್ ವಿಭಾಗ ನಾಯಕಿ ತ್ರಿಶಲಾ, ರೋವರ್ ಮತ್ತು ರೇಂಜರ್ ವಿಭಾಗ ನಾಯಕಿ ಡಾ. ಅಪರ್ಣಾ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಭಾರತಿ ನಾಯಕ್, ಬುಲ್ ಬುಲ್ ವಿಭಾಗದ ನಾಯಕಿ ಸಿಸ್ಟರ್ ಲೋರಿನಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಭರತ್ ರಾಜ್ ಕೆ, ಜಿಲ್ಲಾ ಸಂಘಟನಾ ಆಯುಕ್ತೆ ಸ್ಕೌಟ್ಸ್ ಜಿಲ್ಲಾ ಸಂಘಟನಾ ಆಯುಕ್ತ ವಸಂತ ದೇವಾಡಿಗ ಇದ್ದರು. ಕಾರ್ಯಕ್ರಮದಲ್ಲಿ ಒಟ್ಟು ೧೩೯೨ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡರು. ನಂತರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ