ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭ

KannadaprabhaNewsNetwork |  
Published : May 30, 2024, 12:59 AM ISTUpdated : May 30, 2024, 11:15 AM IST
ಮೂಡುಬಿದಿರೆಯಲ್ಲಿ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನವಿಮರ್ಶಾತ್ಮಕ ಭಾವ ಜೀವನದ ಸಂದೇಶ ನೀಡಿದ ಕಾರಂತರು: ಲಕ್ಷ್ಮೀಶ ತೋಳ್ಪಾಡಿ | Kannada Prabha

ಸಾರಾಂಶ

ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ೨೦೨೩ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.

 ಮೂಡುಬಿದಿರೆ :  ಪ್ರಭುತ್ವಕ್ಕೆ ತಲೆಬಾಗದೆ, ಕೃತಕ ಗಾಂಭೀರ್ಯದಿಂದ ದೂರ ಉಳಿದವರು ಕಾರಂತರು. ಅವರನ್ನು ಜೀರ್ಣ ಮಾಡಿಕೊಳ್ಳುವುದು ಬಹಳ ಕಷ್ಟ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.

ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಇದರ ವತಿಯಿಂದ ಬುಧವಾರ ಸಂಜೆ ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ನಡೆದ ೨೦೨೩ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದ ಬಹು ವಿರಳ ವ್ಯಕ್ತಿತ್ವ ಹೊಂದಿದ್ದ ಶಿವರಾಮ ಕಾರಂತರು, ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ವರ್ಣಿಸಿದರು.

ಚಿಂತನಾಶೀಲ ಲೇಖಕರಾಗಿದ್ದ ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನವು ಪ್ರತಿವರ್ಷವೂ ನೀಡುತ್ತಾ ಬಂದಿರುವ ಶಿವರಾಮ ಕಾರಂತ ಪ್ರಶಸ್ತಿಗಳನ್ನು ಖ್ಯಾತ ಕವಿ, ಬರಹಗಾರ ಬೆಂಗಳೂರಿನ ಡಾ. ಚಿನ್ನಸ್ವಾಮಿ ಮೂಡ್ನಾಕೂಡು ಅವರಿಗೆ, ಖ್ಯಾತ ಜಾನಪದ ವಿದ್ವಾಂಸ, ಸೃಜನಶೀಲ ಲೇಖಕ ಮೈಸೂರಿನ ಪ್ರೊಫೆಸರ್. ಕೃಷ್ಣಮೂರ್ತಿ ಹನೂರ ಅವರಿಗೆ, ಕನ್ನಡದ ಕೀಲಿಮಣೆ ವಿನ್ಯಾಸ ಸಂಶೋಧಿಸಿ ಕನ್ನಡ ಭಾಷೆಗೆ ವಿಶಿಷ್ಟ ಕೊಡುಗೆ ನೀಡಿದ ಉಡುಪಿಯ ಕೆ.ಪಿ. ರಾವ್ ಅವರಿಗೆ ಮತ್ತು ಸಂಸ್ಕೃತಿಯನ್ನು ಕಟ್ಟುವ ಕಾಯಕದಲ್ಲಿ ಅರ್ಪಣಾ ಭಾವದಿಂದ ೭೫ ವರ್ಷಗಳ ಕಾಲ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಹೆಗ್ಗೋಡಿನ ನೀನಾಸಂ ಸಂಸ್ಥೆಗೆ ನೀಡಿ ಗೌರವಿಸಲಾಯಿತು.

ಕಳೆದ ಮೂರು ದಶಕಗಳಿಂದ ಕೃತಿಗಳನ್ನು ಆಧರಿಸಿ ೧೦,೦೦೦ ರು. ಗೌರವ ಸಂಭಾವನೆಯೊಂದಿಗೆ ನೀಡುತ್ತಾ ಬಂದಿರುವ ಶಿವರಾಮ ಕಾರಂತ ಪುರಸ್ಕಾರವನ್ನು ಆತ್ಮಕಥನ ‘ಹಾಡಾಗಿ ಹರಿದಾಳೆ’ ಕೃತಿಗಾಗಿ ಎಚ್.ಆರ್. ಲೀಲಾವತಿ , ಅಂಬೇಡ್ಕರ್ ಮತ್ತು ಕೃತಿಗಾಗಿ ಪ್ರೊಫೆಸರ್.ಎಚ್.ಟಿ. ಪೋತೆ, ವಿನೂತನ ಕಥನ ಕಾರಣ ಕೃತಿಗಾಗಿ ಡಾ.ಬಿ. ಜನಾರ್ದನ ಭಟ್, ಮಾರ್ಗಾನ್ವೇಷಣೆ ಕೃತಿಗಾಗಿ ಡಾ. ನಿತ್ಯಾನಂದ ಬಿ. ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು.

ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಉಪಾಧ್ಯಕ್ಷ ಕೆ. ಶ್ರೀಪತಿ ಭಟ್, ಡಾ..ಎಂ. ಮೋಹನ್‌ ಆಳ್ವ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕೋಶಾಧಿಕಾರಿ ಕೆ. ಕೃಷ್ಣರಾಜ ಹೆಗ್ಡೆ ಸ್ವಾಗತಿಸಿದರು. ಡಾ. ಧನಂಜಯ ಕುಂಬ್ಳೆ, ವೇಣುಗೋಪಾಲ್ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ್ ಮಾವಿನಕುಳಿ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!