ಮೂಡುಬಿದಿರೆ ಇನ್ಸ್‌ಪೆಕ್ಟರ್ ಪ್ರಕರಣ: ಪೀಡಿತೆಯರಿದ್ದರೆ ದೂರು ನೀಡಲು ಸಲಹೆ

KannadaprabhaNewsNetwork |  
Published : Mar 17, 2026, 02:45 AM IST
16ಎಚ್‌ವಿಆರ್‌1 | Kannada Prabha

ಸಾರಾಂಶ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಎಸಿಪಿ ಅವರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ ನೀಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮಂಗಳೂರು: ಮೂಡುಬಿದಿರೆ ಇನ್ಸ್‌ಪೆಕ್ಟರ್ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಎಸಿಪಿ ಅವರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ ನೀಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಇದುವರೆಗೆ ಯಾವುದೇ ಮಹಿಳೆ, ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಯಾವುದೇ ಪೀಡಿತೆಯು ದೂರು ನೀಡಲು ಬಯಸಿದರೆ ಅವರು ಸ್ವತಂತ್ರವಾಗಿ ದೂರು ನೀಡಬಹುದು ಮತ್ತು ಆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಸಮಯದಲ್ಲಿ ಹೊರಬರುವ ಸತ್ಯಾಂಶಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದೂ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾನಪದ ಕಲೆಗಳಿಗೆ ಪ್ರಕೃತಿ ನಿಕಟ ಸಂಬಂಧ: ಟಿ.ಪಿ. ರಮೇಶ್
ರಾಜಕಾರಣ ಮಾಡುತ್ತಿರುವ ದೇಶಪಾಂಡೆ: ಸುನೀಲ ಹೆಗಡೆ ಆರೋಪ