ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ನಂತರ ಮಾತನಾಡಿದ ಅವರು ಕನ್ನಡ ಭವನದಲ್ಲಿ ಚಲನಚಿತ್ರ ಪ್ರದರ್ಶಕ್ಕೆ ಅವಕಾಶ ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಸಂಘಟಕರಿಗೆ ಯಾವುದೇ ರೀತಿಯ ತೊಂದರೆಯಾಗದೆ ಅವರು ಮಾಡಲು ಹೊರಟಿರುವ ಸಮಾಜಮುಖಿ ಕಾರ್ಯವು ಈ ಮೂಲಕ ಯಶಸ್ವಿಯಾಗಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಡಾ.ಅಮರಶ್ರೀ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಪುರಸಭೆಯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಉದ್ಯಮಿಗಳಾದ ಕೆ.ಶ್ರೀಪತಿ ಭಟ್, ಅಶ್ವಿನ್ ಜೊಸ್ಸಿ ಪಿರೇರಾ, ಹೇಮಚಂದ್ರ ಆಚಾರ್ಯ, ರೋಟರಿ ಕ್ಲಬ್‌ನ ಅಧ್ಯಕ್ಷ ಪೂರ್ಣಚಂದ್ರ ಜೈನ್, ಪವರ್ ಫ್ರೆಂಡ್ಸ್‌ನ ಅಧ್ಯಕ್ಷ ವಿನಯ್ ಕುಮಾರ್, ಇನ್ನರ್ ವೀಲ್ ಕ್ಲಬ್‌ನ ಅಧ್ಯಕ್ಷೆ ಬಿಂದಿಯಾ ಶರತ್ ಶೆಟ್ಟಿ, ಮಾನವ ಹಕ್ಕು ಮತ್ತು ಭ್ರಷ್ಟಾಚಾರ ಸಂಸ್ಥೆಯ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಉಷಾ ಭಂಡಾರಿ, ರೋಟರಿ ಕ್ಲಬ್‌ನ ಪ್ರಭಾವತಿ ಶೆಟ್ಟಿ, ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್, ನಟ ವಿನೀತ್ ಹಾಗೂ ವೀಲಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.