ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಉದ್ಘಾಟನೆ

KannadaprabhaNewsNetwork |  
Published : Jun 21, 2025, 12:49 AM IST
ಮೂಡುಬಿದಿರೆ ತಾಲೂಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ | Kannada Prabha

ಸಾರಾಂಶ

ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನೂತನವಾಗಿ ಸ್ಥಾಪಿಸಿದ ಮೂಡುದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನೂತನವಾಗಿ ಸ್ಥಾಪಿಸಿದ ಮೂಡುದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಗೌರವ ಸಲಹೆಗಾರ ಪುರುಷೋತ್ತಮ ಪೂಜಾರಿ, ಮೂಡಬಿದಿರೆ ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದೆ. ದಕ್ಷಿಣ ಕನ್ನಡದ ಜಿಲ್ಲೆಯ 8 ತಾಲೂಕುಗಳಲ್ಲಿ ಮೂಡುಬಿದಿರೆಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ್ಯನಿರ್ವಹಿಸುತ್ತಿದೆ. ಇಂದು ಮೂಡುಬಿದಿರೆಯಲ್ಲಿ ಅಸೋಸಿಯೇಶನ್ ನಿರ್ಮಾಣವಾಗುವುದರ ಮೂಲಕ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಉಮಾನಾಥ ಎ ಕೋಟ್ಯಾನ್ ಮಾತನಾಡಿ, ಹಿಂದಿನ ಕಾಲದಲ್ಲಿ ಹೆಚ್ಚಿನ ಖರ್ಚಿಲ್ಲದೆ ಆಡುತ್ತಿದ್ದ ಆಟ ಕಬಡ್ಡಿ. ಇದೊಂದು ಹಳ್ಳಿಯ ಕ್ರೀಡೆ. ಇಂದು ಪ್ರೋಕಬ್ಬಡಿ ಬಂದ ನಂತರ ಇದರ ಖ್ಯಾತಿ ಹಾಗೂ ಆಟಗಾರರಿಗೆ ಮನ್ನಣೆ ಅಂತರಾಷ್ಟ್ರೀಯ ಮಟ್ಟದಲ್ಲಿ ಲಭಿಸುತ್ತಿದೆ ಎಂದರು.ತಾಲೂಕು ಕಬಡ್ಡಿ ಅಸೋಸಿಯೇಶನ್ ಮಹಾಪೋಷಕರು ಹಾಗೂ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ನನ್ನ ತಂದೆ 1926ರಲ್ಲಿ ಮೈಸೂರು ಮಹಾರಾಜ ಕಾಲೇಜಿನ ಕ್ರಿಕೆಟ್ ತಂಡದ ನಾಯಕತ್ವವಹಿಸಿದ್ದರು. 1929ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿಯವರೊಂದಿಗೆ ಕ್ರಿಕೆಟ್ ಆಡಿದ್ದರು. ಆ ಹಿನ್ನಲೆಯಿಂದ ನಾನು ಕ್ರೀಡಾಸಚಿವನಾಗಿದ್ದ ಸಂದರ್ಭದಲ್ಲಿ ಕ್ರೀಡಾ ಕ್ಷೇತಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಹಕಾರಿಯಾಯಿತು ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಹಾಗೂ ಮೂಡಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ನಿಯೋಜಿತ ಅಧ್ಯಕ್ಷ ವಿವೇಕ್ ಆಳ್ವ ಮಾತನಾಡಿ, ನಮ್ಮ ಸಂಸ್ಥೆ ಹಾಗೂ ಸಂಸ್ಥೆಯ ಅಧ್ಯಕ್ಷರು ಕ್ರೀಡೆಗೆ ನೀಡಿದ ಕೊಡುಗೆಯಿಂದ ನನಗೆ ಈ ಗೌರವ ಲಭಿಸಿದೆ. ಮುಂದಿನ ದಿನಗಳಲ್ಲಿ ಮೂಡುಬಿದಿರೆಯ 30 ಶಾಲೆಗಳ ವಿದ್ಯಾರ್ಥಿಗಳಿಗೆ ಕಬಡ್ಡಿ ಕ್ಷೇತ್ರಕ್ಕೆ ಬೇಕಾದ ಅಗತ್ಯ ತರಬೇತಿ ಹಾಗೂ ಸೌಲಭ್ಯವನ್ನು ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ ಕರ್ಣ, ಮಹಾಪೋಷಕರಾದ ಶ್ರೀಪತಿ ಭಟ್, ತಿಮ್ಮಯ ಶೆಟ್ಟಿ, ಸುನಿಲ್ ಆಳ್ವ, ನಾರಾಯಣ ಪಿಎಂ, ಪ್ರೇಮನಾಥ ಶೆಟ್ಟಿ, ಅಬುಲಾಲ್, ಸುಚರಿತ ಶೆಟ್ಟಿ, ಸುದರ್ಶನ್ ಇದ್ದರು.

ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಶಿಯೇಶನ್ ಸದಸ್ಯರು ಪಾಲ್ಗೊಂಡಿದ್ದರು.

ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಕಾರ್ಯಾಧ್ಯಕ್ಷ ಪ್ರಮೋದ್ ಸ್ವಾಗತಿಸಿದರು. ಕಾರ್ಯದರ್ಶಿ ಹಂಸವತಿ ಸಿಎಚ್‌ ವಂದಿಸಿದರು. ಸದಸ್ಯ ನವೀನ್ ಅಂಬೂರಿ ನಿರೂಪಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ