ಕುಂದಾಪುರ: ಐಎಂಜೆಯಲ್ಲಿ ಬಾರಿಸು ಕನ್ನಡ ಡಿಂಡಿಮವ

KannadaprabhaNewsNetwork |  
Published : Oct 07, 2026, 02:45 AM IST
06ಐಎಂಜೆ | Kannada Prabha

ಸಾರಾಂಶ

ಇಲ್ಲಿನ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಸಾಹಿತ್ಯ ಸಂಘದ ಆಶ್ರಯದಲ್ಲಿ, ಮಂಗಳೂರು ವಿವಿ ಕನ್ನಡ ಅಧ್ಯಯನ ಸಂಸ್ಥೆ ಗಿಳಿವಿಂಡು ಸಂಯೋಜನೆಯಲ್ಲಿ ಬಾರಿಸು ಕನ್ನಡ ಡಿಂಡಿಮವ - ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಸರಣಿ ಕಾರ್ಯಕ್ರಮವು ಸೋಮವಾರ ಜರುಗಿತು.

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಸಾಹಿತ್ಯ ಸಂಘದ ಆಶ್ರಯದಲ್ಲಿ, ಮಂಗಳೂರು ವಿವಿ ಕನ್ನಡ ಅಧ್ಯಯನ ಸಂಸ್ಥೆ ಗಿಳಿವಿಂಡು ಸಂಯೋಜನೆಯಲ್ಲಿ ಬಾರಿಸು ಕನ್ನಡ ಡಿಂಡಿಮವ - ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಸರಣಿ ಕಾರ್ಯಕ್ರಮವು ಸೋಮವಾರ ಜರುಗಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಪ್ರಾಂಶುಪಾಲೆ ಡಾ. ಚಂದ್ರಾವತಿ ಶೆಟ್ಟಿ ಅವರು ನಿಮ್ಮ ಸಮಯ - ನಿಮ್ಮ ಭವಿಷ್ಯ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಸಮಯದ ಸದ್ಬಳಕೆ, ಹೊಸ ಕೌಶಲ್ಯಗಳ ಅಭಿವೃದ್ಧಿ, ಮೊಬೈಲ್‌ನ ಸರಿಯಾದ ಬಳಕೆ ಮತ್ತು ಜ್ಞಾನಾರ್ಜನೆಯ ಪ್ರವೃತ್ತಿಯ ಕುರಿತು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಅವರು ಗಿಳಿವಿಂಡು ಸಂಸ್ಥೆಯ ಸ್ಥಾಪನೆಯ ಹಿನ್ನೆಲೆ ಮತ್ತು ಉದ್ದೇಶಗಳನ್ನು ತಿಳಿಸಿದರು.

ಗಿಳಿವಿಂಡು ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಬಿ. ಶಿವರಾಮ ಶೆಟ್ಟಿ ಅವರು ಭಾಷೆಯ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಲ್ಲಿ ಕಲಿಕಾ ಪ್ರವೃತ್ತಿ ಹಾಗೂ ಸಂವಹನ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಟೇಲ್ ಅವರು ಮಾತನಾಡಿ, ಇಂದಿನ ಕಾರ್ಯಕ್ರಮವು ಅರ್ಥಪೂರ್ಣವಾಗಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪಾಲನೆಯನ್ನು ಇನ್ನಷ್ಟು ಜಾಗೃತಗೊಳಿಸಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಾಹಿತ್ಯ ಸಂಘದ ಸಂಯೋಜಕಿ ಕನ್ನಡ ಉಪನ್ಯಾಸಕಿ ರೇವತಿ, ವಿದ್ಯಾರ್ಥಿ ಸಂಯೋಜಕ ತೃತೀಯ ಬಿಸಿಎ ವಿದ್ಯಾರ್ಥಿ ಅಕ್ಷಯ್ ಶೆಟ್ಟಿ ಉಪಸ್ಥಿತರಿದ್ದರು. ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿ ಶ್ರೀರಕ್ಷಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಅಭಿವೃದ್ಧಿಗೆ ಪ್ರಶಸ್ತಿ ಮನ್ನಣೆ: ಪೂಂಜಾ
ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂ ದೌರ್ಜನ್ಯ: ಜ್ಯೋತಿ ಹೆಬ್ಬಾರ್ ಆಕ್ರೋಶ