ಮೂಡ್ಲಕಟ್ಟೆ ಎಂಐಟಿಯಲ್ಲಿ ಉದ್ಯೋಗ ಮೇಳ

KannadaprabhaNewsNetwork |  
Published : Oct 03, 2026, 02:45 AM IST
ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗ ವಾಗ್ದಾನ ಪತ್ರವನ್ನು ನೀಡಲಾಯಿತು | Kannada Prabha

ಸಾರಾಂಶ

ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಅವರದೇ ಪ್ರದೇಶದಲ್ಲಿ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಜಾಬ್‌ ಎಕ್ಸ್‌ಪ್ರೆಸ್ 2026 – ಜಾಬ್ ಮೇಳ ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆವರಣದಲ್ಲಿ

ಕುಂದಾಪುರ: ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಅವರದೇ ಪ್ರದೇಶದಲ್ಲಿ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಜಾಬ್‌ ಎಕ್ಸ್‌ಪ್ರೆಸ್ 2026 – ಜಾಬ್ ಮೇಳ ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆವರಣದಲ್ಲಿ ನಡೆಯಿತು.

ಇಲ್ಲಿನ ಐಎಂಜೆ ಇನ್ಸ್ಟಿಟ್ಯೂಷನ್ಸ್ ಹಾಗೂ 1ಎಂ1ಬಿ ಫೌಂಡೇಶನ್ ವತಿಯಿಂದ, ರಾಜ್ಯಸರ್ಕಾರ, ಮೈಕ್ರೋಸಾಫ್ಟ್ ಹಾಗೂ ಎಂಇಐಟಿವೈ ಸಹಭಾಗಿತ್ವದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವು ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು, ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಕೈಗಾರಿಕೆಗಳ ಪ್ರಮುಖ ಕಂಪನಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಮಹತ್ವದ ವೇದಿಕೆಯಾಯಿತು.

ಈ ಉದ್ಯೋಗ ಮೇಳದಲ್ಲಿ ಒಟ್ಟು 1,526 ಮಂದಿ ನೋಂದಣಿ ಮಾಡಿಕೊಂಡಿದ್ದು, 1000ಕ್ಕೂ ಮಂದಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಸಕ್ರಿಯವಾಗಿ ಭಾಗವಹಿಸಿದರು. ಅವರು ವಿವಿಧ ಕಂಪನಿಗಳ ಉದ್ಯೋಗಾವಕಾಶಗಳಿಗೆ ಒಟ್ಟು 2,728 ಅರ್ಜಿಗಳನ್ನು ಸಲ್ಲಿಸಿದ್ದು, 200ಕ್ಕೂ ಅಧಿಕ ಅಭ್ಯರ್ಥಿಗಳು ಉದ್ಯೋಗದ ವಾಗ್ದಾನ ಪತ್ರಗಳನ್ನು ಪಡೆದಿದ್ದು, 700ಕ್ಕೂ ಅಧಿಕ ಅಭ್ಯರ್ಥಿಗಳು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಆಯ್ಕೆ ಆಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳೆಯ ಪಾದರಕ್ಷೆಗಳಿಗೆ ಹೊಸ ರೂಪ ‘ದಾನ’
ಉಡುಪಿ: ನ. 27ರಿಂದ ರಾಜ್ಯ ಮಟ್ಟದ ಆಹಾರ ಮೇಳ