ಇಂದು ಆತ್ಮಶಕ್ತಿ ಮೂಡುಬಿದಿರೆ ಶಾಖೆಯ ಉದ್ಘಾಟನೆ: ರಾಮಯ್ಯ ಕಾಂಪ್ಲೇಕ್ಸ್ ನಲ್ಲಿ 35ನೇ ಶಾಖೆ

KannadaprabhaNewsNetwork |  
Published : Apr 19, 2026, 03:00 AM IST
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲೋಗೋ | Kannada Prabha

ಸಾರಾಂಶ

ಮಂಗಳೂರು ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ೩೫ನೇ ಮೂಡುಬಿದಿರೆ ಶಾಖೆಯನ್ನು ಮೂಡುಬಿದಿರೆಯ ಮುಖ್ಯ ರಸ್ತೆಯ ರಾಮಯ್ಯ ಕಾಂಪ್ಲೇಕ್ಸ್ ನಲ್ಲಿ ಏ.೧೯ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ.

ಮಂಗಳೂರು: ಮಂಗಳೂರು ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ೩೫ನೇ ಮೂಡುಬಿದಿರೆ ಶಾಖೆಯನ್ನು ಮೂಡುಬಿದಿರೆಯ ಮುಖ್ಯ ರಸ್ತೆಯ ರಾಮಯ್ಯ ಕಾಂಪ್ಲೇಕ್ಸ್ ನಲ್ಲಿ

ಏ.೧೯ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ, ‘ಸಹಕಾರ ರತ್ನ’ ಡಾ.ಎಂ. ಎನ್.ರಾಜೇಂದ್ರ ಕುಮಾರ್ ನೂತನ ಶಾಖೆಯನ್ನು ಉದ್ಘಾಟಿಸುವರು. ಸಂಘದ ಅಧ್ಯಕ್ಷ ‘ಸಹಕಾರ ರತ್ನ’ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸುವರು. ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಎ.ಕೋಟ್ಯಾನ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಐ.ತಾರಾನಾಥ ಪೂಜಾರಿ ಭದ್ರತಾಕೋಶ ಉದ್ಘಾಟಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಮ್. ಮೋಹನ್ ಆಳ್ವ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡುವರು. ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ, ‘ಸಹಕಾರ ರತ್ನ’ ಭಾಸ್ಕರ್ ಎಸ್.ಕೋಟ್ಯಾನ್ ನಿರಖು ಠೇವಣಿ ಪತ್ರ ಬಿಡುಗಡೆ ಮಾಡುವರು. ಮಾಜಿ ಸಚಿವ ಅಭಯಚಂದ್ರ ಜೈನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡುವರು. ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮೂಡುಬಿದ್ರೆ ಅಧ್ಯಕ್ಷ ಸುರೇಶ್ ಕೆ.ಪೂಜಾರಿ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡುವರು. ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ. ಉಳಿತಾಯ ಖಾತೆಗೆ ಚಾಲನೆ ನೀಡುವರು. ಪುರಸಭೆ ನಿಕಟಪೂರ್ವ ಉಪಾಧ್ಯಕ್ಷ ನಾಗರಾಜ್ ಪೂಜಾರಿ ಆವರ್ತನ ಖಾತೆಗೆ ಚಾಲನೆ ನೀಡುವರು. ದೇವಾಡಿಗ ಸುಧಾರಕ ಸಂಘದ ಅಧ್ಯಕ್ಷ ಪುರಂದರ ದೇವಾಡಿಗ ಪಿಗ್ಮಿ ಖಾತೆಗೆ ಚಾಲನೆ ನೀಡುವರು. ಯುವವಾಹಿನಿ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ್ ಆಚಾರ್ಯ, ಉದ್ಯಮಿ ಶ್ರೀಪತಿ ಭಟ್, ಶಾಖೆಯ ಕಟ್ಟಡದ ಮಾಲೀಕ ಸುರೇಶ್ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.೧೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಟ ಮೌಲ್ಯ ರು.೧೨,೦೦೦ ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸದಸ್ಯರಿಗೆ ಸಾಲ ಸೌಲಭ್ಯ, ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆ ವ್ಯವಹಾರದ ಸಮಯದಲ್ಲಿ ಲಭ್ಯ, ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿದೆ ಎಂದು ಸಂಘದ ಅಧ್ಯಕ್ಷ ‘ಸಹಕಾರ ರತ್ನ’ ಚಿತ್ತರಂಜನ್ ಬೋಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಗೋಪಾಲ್ ಎಮ್., ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಶಿಸುತ್ತಿರುವ ಪರಂಪರೆ ಪುನಃಸ್ಥಾಪಿಸಬೇಕು: ಕಲ್ಕೂರ
ಶಂಕರ ಜಯಂತಿ: ಮೇ 3ರಂದು ಅಂಬಿಕಾ ಸಂಸ್ಥೆಯಲ್ಲಿ ವಿವಿಧ ಸ್ಪರ್ಧೆ