ಬೆಳ್ತಂಗಡಿ: ಅಂತರಂಗದ ನೆಮ್ಮದಿಗೆ ಸಾಹಿತ್ಯದ ಅಗತ್ಯವಿದೆ ಎಂದು ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಬಿ.ಪಿ ಸಂಪತ್ ಕುಮಾರ್ ಹೇಳಿದರು.
ಅಳದಂಗಡಿಯ ಖ್ಯಾತ ವೈದ್ಯ ಡಾ. ಎನ್.ಎಂ ತುಳಪುಳೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಮಾತನಾಡಿ ಡಾ. ಟಿ. ಎನ್. ತುಳಪುಳೆ ಅವರ ಸಾಹಿತ್ಯ ಪರಿಚಾರಕರ ಸಾಹಿತ್ಯ ಪ್ರೀತಿ ವಿವರಿಸಿ ಇಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದರು.
ಶ್ರೀ ಧಂ.ಮಂ ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಉಪಸ್ಥಿತರಿದ್ದರು. ಕನ್ನಡ ಭಾಷಾ ಉಪನ್ಯಾಸಕ ಸುಭಾಷ್ ರಾವ್ ಬೋಳೂರು ಹಾಗೂ ವಿಶ್ವನಾಥ ಎಸ್ ಅಭ್ಯಾಗತರನ್ನು ಗೌರವಿಸಿದರು.ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯದುಪತಿ ಗೌಡ ಸ್ವಾಗತಿಸಿದರು. ಶ್ರೀ ಧಂ.ಮಂ ಪ.ಪೂ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ವಂದಿಸಿದರು. ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು. ಡಾ. ಬಿ.ಪಿ ಸಂಪತ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.