ನಮ್ಮ ಕಸ ನಮ್ಮ ಜವಾಬ್ದಾರಿ ಮನೋಭಾವದಿಂದ ಜಾಗೃತಿ: ಭಟ್ಟಾರಕ ಸ್ವಾಮೀಜಿ

KannadaprabhaNewsNetwork |  
Published : Jul 16, 2026, 03:30 AM IST
ಸ್ವಸ್ತಿಶ್ರೀ ಜೈನ ಪಿಯು ಕಾಲೇಜಿನಲ್ಲಿ ಕಸ ವಿಲೇವಾರಿ ಪ್ರಾತ್ಯಕ್ಷಿಕೆನಮ್ಮ ಕಸ ನಮ್ಮ ಜವಾಬ್ದಾರಿ ಮನೋಭಾವದಿಂದ ಜಾಗೃತಿ : ಭಟ್ಟಾರಕ ಸ್ವಾಮೀಜಿ  | Kannada Prabha

ಸಾರಾಂಶ

“ನಮ್ಮ ಕಸ ನಮ್ಮ ಜವಾಬ್ದಾರಿ” ಎಂಬ ಮನೋಭಾವ ಬೆಳೆಸಿಕೊಂಡು ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದಾಗ ಮಾತ್ರ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಲು ಸಾಧ್ಯ ಎಂದು ಮೂಡಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.

ಮೂಡುಬಿದಿರೆ: “ನಮ್ಮ ಕಸ ನಮ್ಮ ಜವಾಬ್ದಾರಿ” ಎಂಬ ಮನೋಭಾವ ಬೆಳೆಸಿಕೊಂಡು ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದಾಗ ಮಾತ್ರ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಲು ಸಾಧ್ಯ ಎಂದು ಮೂಡಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನ ಸಮಾಜ ಸೇವಾ ಸಂಘ ಹಾಗೂ ಮೂಡುಬಿದಿರೆ ಪುರಸಭೆ ಸಹಯೋಗದಲ್ಲಿ ಆಯೋಜಿಸಿದ್ದ ಕಸ ವಿಲೇವಾರಿ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೂಡುಬಿದಿರೆ ಪುರಸಭೆ ಮುಖ್ಯಾಧಿಕಾರಿ ಇಂದು, ಪರಿಸರ ಅಭಿಯಂತೆ ಶಿಲ್ಪಾ ಎಸ್. ಅವರನ್ನು ಸ್ವಾಮೀಜಿ ಗೌರವಿಸಿದರು.

ಶಿಲ್ಪಾ ಎಸ್. ವಿದ್ಯಾರ್ಥಿಗಳಿಗೆ ಕಸ ವಿಲೇವಾರಿ ಕುರಿತು ಮಾಹಿತಿ ನೀಡಿ, ವಿವಿಧ ರೀತಿಯ ಕಸವನ್ನು ಹೇಗೆ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂಬುದನ್ನು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಜ್ವಲ್ ಶೆಣೈ ವಿವಿಧ ಮಾದರಿಗಳ ಮೂಲಕ ಕಸ ವಿಲೇವಾರಿಯ ಪ್ರಾತ್ಯಕ್ಷಿಕೆ ನೀಡಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ವೇತಾ ಜೈನ್, ಉಪನ್ಯಾಸಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಶ್ರೀ ಸ್ವಾಗತಿಸಿದರು. ಸರಸ್ವತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಕ್ಕಿ-ಪಿಕ್ಕಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕ್ರಮ
ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ