ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ವಿದ್ಯಾರ್ಥಿಗಳಿಂದ ಸ್ವಚ್ಛತೆ

KannadaprabhaNewsNetwork |  
Published : Sep 24, 2026, 02:45 AM IST
23ಐಎಂಜೆ | Kannada Prabha

ಸಾರಾಂಶ

ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರೋವರ್ ಸ್ಕೌಟ್ಸ್ ಮತ್ತು ರೇಂಜರ್ ಗೈಡ್ಸ್ ಘಟಕದ ವತಿಯಿಂದ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಹಯೋಗದೊಂದಿಗೆ ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರೋವರ್ ಸ್ಕೌಟ್ಸ್ ಮತ್ತು ರೇಂಜರ್ ಗೈಡ್ಸ್ ಘಟಕದ ವತಿಯಿಂದ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಹಯೋಗದೊಂದಿಗೆ ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ ಅವರ ಸೂಚನೆ ಹಾಗೂ ರೈಲ್ವೆ ಇಲಾಖೆಯ ಮಾರ್ಗದರ್ಶನದಂತೆ ಈ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ವಿಭಾಗದ ರೈಲ್ವೆ ಅಧಿಕಾರಿ ಶಾಲಿನಿ ಅವರು ಉದ್ಘಾಟಿಸಿದರು. ನಂತರ ಅವರು, ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಶ್ಲಾಘಿಸಿದರಲ್ಲದೇ, ‘ಸ್ವಚ್ಛ ಭಾರತದ ಕನಸು ಇಂತಹ ಯುವಜನರ ಸಕ್ರಿಯ ಭಾಗವಹಿಸುವಿಕೆಯಿಂದ ಸಾಕಾರಗೊಳ್ಳುತ್ತದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಆನಂದ್ ಬಿ. ಆಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಐ.ಎಂ.ಜೆ. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಯೋಗೇಶ್ ಡಿ. ಮೇಸ್ತ ಹಾಗೂ ರೇಂಜರ್ ಲೀಡರ್ ಪ್ರಶೀಮಾ ಪಿ. ಉಪಸ್ಥಿತರಿದ್ದರು.

ಐ.ಎಂ.ಜೆ. ಕಾಲೇಜಿನ 40ಕ್ಕೂ ಅಧಿಕ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ರೈಲ್ವೆ ಸಿಬ್ಬಂದಿಯ ಸಹಕಾರದೊಂದಿಗೆ ನಿಲ್ದಾಣದ ಪ್ಲಾಟ್‌ಫಾರ್ಮ್, ಪ್ರಯಾಣಿಕರ ಕಾಯುವ ಕೊಠಡಿ ಹಾಗೂ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಿದರು. ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯವನ್ನು ವಿಂಗಡಿಸಿ ವಿಲೇವಾರಿ ಮಾಡುವುದರ ಜೊತೆಗೆ ಪ್ರಯಾಣಿಕರಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ವಿಡಿಯಾ ಸಿಇಒ ರೇಸಲ್ಲಿ 3 ಭಾರತೀಯರು ಸೇರಿ 11 ಮಂದಿ
ಕೃತಕ ಬುದ್ಧಿಮತ್ತೆಯೇ ವಿಶ್ವದ ಕದನಭೂಮಿ - ಎನ್ವಿಡಿಯಾ ಪ್ರಕರಣ ಎಚ್ಚರಿಕೆ ಗಂಟೆ