ಕುಮಾರೇಶ್ವರ ಮಠದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ ಮೂಜಗು

KannadaprabhaNewsNetwork |  
Published : Mar 25, 2024, 12:49 AM IST
ಪೋಟೋ ಇದೆ. | Kannada Prabha

ಸಾರಾಂಶ

ಹಾನಗಲ್ಲ ಶ್ರೀ ಕುಮಾರೇಶ್ವರ ವಿರಕ್ತಮಠದ ವಿಷಯದಲ್ಲಿ ನಡೆದಿರುವ ಬೆಳವಣಿಗೆಗಳು ನಾಲ್ಕಾರು ದಿನಗಳಲ್ಲಿ ಸುಖಾಂತ್ಯಗೊಳ್ಳುವ ಹಂತಕ್ಕೆ ಬಂದಿದ್ದು, ಭಾನುವಾರ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರುಗಳೂ ಆಗಿರುವ ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹಾನಗಲ್ಲಿನಲ್ಲಿ ಮಠದ ಸಲಹಾ ಸಮಿತಿಯ ಸಭೆ ನಡೆಸಿದರು ಎಂದು ತಿಳಿದು ಬಂದಿದೆ.

ಹಾನಗಲ್ಲ: ಹಾನಗಲ್ಲ ಶ್ರೀ ಕುಮಾರೇಶ್ವರ ವಿರಕ್ತಮಠದ ವಿಷಯದಲ್ಲಿ ನಡೆದಿರುವ ಬೆಳವಣಿಗೆಗಳು ನಾಲ್ಕಾರು ದಿನಗಳಲ್ಲಿ ಸುಖಾಂತ್ಯಗೊಳ್ಳುವ ಹಂತಕ್ಕೆ ಬಂದಿದ್ದು, ಭಾನುವಾರ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರುಗಳೂ ಆಗಿರುವ ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹಾನಗಲ್ಲಿನಲ್ಲಿ ಮಠದ ಸಲಹಾ ಸಮಿತಿಯ ಸಭೆ ನಡೆಸಿದರು ಎಂದು ತಿಳಿದು ಬಂದಿದೆ.

ಶುಕ್ರವಾರ ಮಧ್ಯಾಹ್ನ ಸಲಹಾ ಸಮಿತಿಯೊಂದಿಗೆ ಹಾನಗಲ್ಲಿನಲ್ಲಿ ಶ್ರೀ ಕುಮಾರೇಶ್ವರ ಮಠದ ಆಸ್ತಿಯ ಮೇಲೆ ಸಾಲ ಮಾಡಿರುವ ಹಾಗೂ ಬೆಳಗಾಲಪೇಟೆಯ ಮಠದ ಜಾಗದ ಕುರಿತಾದ ಸಂಗತಿಗಳೂ ಸೇರಿದಂತೆ ಬಹಳಷ್ಟು ವಿಷಯಗಳ ಚರ್ಚೆ ನಡೆದಿದೆ. ಭಕ್ತರ ಮುಂದೆ ಎಲ್ಲ ಸತ್ಯಾಸತ್ಯತೆಯನ್ನು ನಾಲ್ಕಾರು ದಿನಗಳಲ್ಲಿ ಸಭೆ ಕರೆದು ಎಲ್ಲ ವಿವರಣೆಗಳನ್ನು ನೀಡುವ ಭರವಸೆ ನೀಡಿದ್ದಾರೆ. ಈ ವಿಷಯದಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶ್ರೀಮಠ ಸೇರಿದಂತೆ ಸಂಸ್ಥೆಯ ಶಿಕ್ಷಣ ಸಂಸ್ಥೆಗಳನ್ನೂ ಒಳಗೊಂಡು ಹಣಕಾಸಿನ ವಿಷಯದಲ್ಲಿ ಯಾವುದೇ ಲೋಪವಾಗಿಲ್ಲ. ಅದೆಲ್ಲದರ ಬಗ್ಗೆ ಸ್ಪಷ್ಟಪಡಿಸುವ ವಿಶ್ವಾಸವನ್ನು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರುಗಳು ಆದ ಹಾನಗಲ್ಲ ಶ್ರೀ ಕುಮಾರೇಶ್ವರ ಮಠದ ಪೀಠಾಧಿಪತಿ ಕುಮಾರಮಹಾಸ್ವಾಮಿಗಳು ತಿಳಿಸಿದ್ದಾರೆ.

ಈ ವರೆಗೆ ನಡೆದ ಎಲ್ಲ ಬೆಳವಣಿಗೆಗಳ ಬಗ್ಗೆ ಭಕ್ತರು ಆತಂಕ ಹೊಂದುವ ಅಗತ್ಯವಿಲ್ಲ. ಎಲ್ಲವೂ ಸುಖಾಂತ್ಯವಾಗಲಿದೆ ಎಂಬ ಅಭಿಪ್ರಾಯ ಸಭೆಯ ನಂತರ ವ್ಯಕ್ತವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?
ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು