ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಘಟಕ, ಕೇಶವ ಸ್ಮೃತಿ ಸಂವರ್ಧನ ಸಮಿತಿ ಮಂಗಳೂರು ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಮಂಗಳೂರು: ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಘಟಕ, ಕೇಶವ ಸ್ಮೃತಿ ಸಂವರ್ಧನ ಸಮಿತಿ ಮಂಗಳೂರು ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪ್ರೊ.ಗಣಪತಿ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸೇವಾ ಭಾರತಿಯ ಕೆ.ಚೆನ್ನಯ್ಯ ಸ್ವಾಮಿ ಅಧಕ್ಷತೆ ವಹಿಸಿದ್ದರು. ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಪ್ರಕಾಶ್ ಕೋಟ್ಯಾನ್, ಕೇಶವ ಸ್ಮೃತಿ ಸೌಹಾರ್ದನ ಸಮಿತಿಯ ಗಜಾನನ ಪೈ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್‌ನ ಸಂಯೋಜಕ ಪ್ರೊ.ಡಾ.ಶೇಷಪ್ಪ ಅಮೀನ್ ಮತ್ತಿತರರು ಇದ್ದರು.ಡಾ.ಕುಸುಮ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮಾದಕ ದ್ರವ್ಯ ವ್ಯಸನದಿಂದ ಮುಕ್ತರಾದವರು ತಮ್ಮ ಅನುಭ ಹಂಚಿಕೊಂಡರು. ಚೆನ್ನಯ್ಯ ಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಶೇಷಪ್ಪ ಅಮೀನ್ ಸ್ವಾಗತಿಸಿದರು. ಶೈನಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.