ಮೂರ್ನಾಡು: ಗೌರಿ ಗಣೇಶ ಮೂರ್ತಿ ವಿಸರ್ಜನೋತ್ಸವ

KannadaprabhaNewsNetwork |  
Published : Sep 22, 2026, 02:45 AM IST
 | Kannada Prabha

ಸಾರಾಂಶ

ಮೂರ್ನಾಡಿನ ಪಟ್ಟಣದಲ್ಲಿ ವಿವಿಧ ಸಂಘಗಳ ವತಿಯಿಂದ ಗೌರಿ-ಗಣೇಶೋತ್ಸವದ ದಿನ ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, 7 ದಿನಗಳವರೆಗೆ ಪೂಜಾ ಕೈಂಕರ್ಯಗಳನ್ನು ನಡೆಸಿ ಭಾನುವಾರ ರಾತ್ರಿ ಬಲಮುರಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು.

ಮೂರ್ನಾಡು :ಮೂರ್ನಾಡಿನ ಪಟ್ಟಣದಲ್ಲಿ ವಿವಿಧ ಸಂಘಗಳ ವತಿಯಿಂದ ಗೌರಿ-ಗಣೇಶೋತ್ಸವದ ದಿನ ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, 7 ದಿನಗಳವರೆಗೆ ಪೂಜಾ ಕೈಂಕರ್ಯಗಳನ್ನು ನಡೆಸಿ ಭಾನುವಾರ ರಾತ್ರಿ ಬಲಮುರಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು.ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿ ಗಣೇಶ ಉತ್ಸವ ಮೂರ್ತಿ, ಮೂರ್ನಾಡು ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿ, ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಮೂರ್ನಾಡು ಪಟ್ಟಣದ ಟಿ ಜಂಕ್ಷನ್‌ನಲ್ಲಿ 32ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಗಜೇಂದ್ರ ಯುವ ಶಕ್ತಿ ಸಂಘದ ವತಿಯಿಂದ 7ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್ ಇವರ ವತಿಯಿಂದ 3ನೇ ವರ್ಷದ ಗೌರಿ-ಗಣೇಶೋತ್ಸವದ ವಿನಾಯಕ ಮೂರ್ತಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 18ನೇ ವರ್ಷದ ಗೌರಿ-ಗಣೇಶೋತ್ಸವ ಅಂಗವಾಗಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿರಿಸಿ ಮೂರ್ನಾಡಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಗಣೇಶ ಉತ್ಸವ ಮೂರ್ತಿಗಳನ್ನು ಹೊತ್ತ ಆರು ವಿದ್ಯುತ್‌ ಅಲಂಕೃತ ಮಂಟಪಗಳ ಮುಂದೆ ಡಿಜೆ ಸೌಂಡ್‌ ಅಬ್ಬರವಿತ್ತು. ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು. ಮೂರ್ನಾಡು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು, ಪಾಲ್ಗೊಂಡರು. ನಂತರ ಬಲಮುರಿಯ ಕಾವೇರಿ ನದಿಯಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರ್ನಾಡಿನಲ್ಲಿ ವಿಜೃಂಭಣೆಯ ಗಣೇಶ ವಿಸರ್ಜನಾ ಮಹೋತ್ಸವ
ಕುಶಾಲನಗರ ಆನೆಕಾಡು: ಸರಣಿ ಅಪಘಾತಕ್ಕೆ ಮೂವರು ಬಲಿ