14 ವರ್ಷದ ಬಾಲಕಿ ಮೂರು ತಿಂಗಳ ಗರ್ಭಿಣಿ । ಆರೋಪಿ ಪತ್ತೆಗಾಗಿ ತನಿಖೆ ಆರಂಭ
ಮೊರಾರ್ಜಿ ವಸತಿ ಶಾಲೆಯ 9ನೇ ತರಗತಿಯ 14 ವರ್ಷದ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಗಾಂಡ್ಲಚಿಂತೆ ಗ್ರಾಮದ 14 ವರ್ಷದ ಬಾಲಕಿ ಗಡಿಗವಾರಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಸಂತ್ರಸ್ತೆಯ ಮೇಲೆ ಗಾಂಡ್ಲಚಿಂತೆ ಗ್ರಾಮದ 23 ವರ್ಷದ ಚಂದ್ರು ಎಂಬಾತನಿಂದ ಕಳೆದ ಒಂದು ವರ್ಷದಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿರುವುದಾಗಿ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಪೋಷಕರು ಕುರಿ ಮೇಯಿಸಲು ಹೋದಾಗ, ಮನೆಗೆ ನುಗ್ಗಿದ ಚಂದ್ರು ಆಕೆಯ ಮೇಲೆ ಅತ್ಯಾಚಾರ ನಡೆಸುತ್ತಿದ್ದು, ಬಾಯಿ ಬಿಟ್ಟರೆ ಕೊಲೆ ಮಾಡ್ತೀನಿ ಎಂದು ಪ್ರಾಣ ಬೆದರಿಕೆ ಹಾಕಿದ್ದನು. ಕಳೆದ 3 ತಿಂಗಳಿಂದ ಸಂತ್ರಸ್ತೆ ಮಾಸಿಕ ಋುತು ಚಕ್ರವಾಗದ ದ ಹಿನ್ನೆಲೆ ಅನುಮಾನಗೊಂಡು ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದಾಗ ವೈದ್ಯಕೀಯ ಪರೀಕ್ಷೆ ವೇಳೆ ಅಪ್ರಾಪ್ತ ಬಾಲಕಿ 3 ತಿಂಗಳ ಗರ್ಭಿಣಿ ಎಂಬ ಆಘಾತಕಾರಿ ಸತ್ಯ ಬಹಿರಂಗವಾಗಿದೆ.
ಗಡಿಗವಾರಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರತಿ ತಿಂಗಳು ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕಿತ್ತು .ಆದರೆ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸದೆ ನಿಯಮ ಗಾಳಿಗೆ ತೂರಿದ ಪ್ರಾಂಶುಪಾಲರ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.