ದೇವನಹಳ್ಳಿ: ಮೇ ೯ರಂದು ಚಿತ್ರದುರ್ಗದಲ್ಲಿ ನಡೆಯುವ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ೭ ಮಹಾಶಕ್ತಿ ಕೇಂದ್ರಗಳಿಗೆ ೨೫ ಬಸ್ಸುಗಳ ವ್ಯವಸ್ಥೆ ಮಾಡಿದ್ದು ಹೆಚ್ಚಿನ ಕಾರ್ಯಕರ್ತರು ಭಾಗವಹಿಸುವಂತೆ ಬಿಜೆಪಿ ತಾಲೂಕು ಅಧ್ಯಕ್ಷ ಎಲ್.ಎನ್.ಅಂಬರೀಶ್‌ಗೌಡ ತಿಳಿಸಿದರು
ದೇವನಹಳ್ಳಿ: ಮೇ ೯ರಂದು ಚಿತ್ರದುರ್ಗದಲ್ಲಿ ನಡೆಯುವ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ೭ ಮಹಾಶಕ್ತಿ ಕೇಂದ್ರಗಳಿಗೆ ೨೫ ಬಸ್ಸುಗಳ ವ್ಯವಸ್ಥೆ ಮಾಡಿದ್ದು ಹೆಚ್ಚಿನ ಕಾರ್ಯಕರ್ತರು ಭಾಗವಹಿಸುವಂತೆ ಬಿಜೆಪಿ ತಾಲೂಕು ಅಧ್ಯಕ್ಷ ಎಲ್.ಎನ್.ಅಂಬರೀಶ್‌ಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ರಾಜಕೀಯ ಪ್ರವೇಶಿಸಿ ೫೦ ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಭಿಮಾನೋತ್ಸವ ಆಯೋಜಿಸಲಾಗಿದೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಕೊಟ್ಟ ಜನಪರ ಯೋಜನೆಗಳು ಶಾಶ್ವತವಾಗಿ ಜನಮನದಲ್ಲಿ ನೆಲೆಯೂರಿದೆ. ಹೆಣ್ಣುಮಕ್ಕಳಿಗೆ ಉಚಿತ ಸೈಕಲ್, ಭಾಗ್ಯಲಕ್ಷ್ಮಿ ಬಾಂಡ್, ರೈತರ ಸಾಲಾ ಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳಿತ ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಗಟ್ಟಿನೆಲೆ ಕಟ್ಟಿಕೊಟ್ಟ ಕೀರ್ತಿ ಬಿ.ಎಸ್.ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಅವರು ಹಾಕಿಕೊಟ್ಟ ಭದ್ರ ಬುನಾದಿಯಿಂದ ರಾಜ್ಯದಲ್ಲಿ ಬಿಜೆಪಿ ಪಕ್ಷ ಗಟ್ಟಿಯಾಗಿ ನೆಲೆಯೂರಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ರೈತಪರ ಹೋರಾಟಗಳಲ್ಲಿ ರೈತರಿಗೆ ಚೈತನ್ಯ ತುಂಬಿದ್ದಾರೆ. ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಅಭಿಮಾನೋತ್ಸವಕ್ಕೆ ವಿಧಾನಸಭಾ ಕ್ಷೇತ್ರದಿಂದ ತಾಲೂಕು ಅಧ್ಯಕ್ಷ ಎಲ್.ಎನ್.ಅಂಬರೀಶ್‌ಗೌಡ ನೇತೃತ್ವದಲ್ಲಿ ೨೫ ಬಸ್ಸುಗಳಲ್ಲಿ ೧ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗವೇಣಿ, ಮಾಜಿ ಶಾಸಕ ಜಿ.ಚಂದ್ರಣ್ಣ, ಬಯಪ ಮಾಜಿ ಅಧ್ಯಕ್ಷ ಅಶ್ವಥ್‌ನಾರಾಯಣ್, ಒಬಿಸಿ ಜಿಲ್ಲಾಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಎಸ್ಸಿ ಮೋರ್ಚ ಅಧ್ಯಕ್ಷ ರಾಜಪ್ಪ, ಮುಖಂಡರಾದ ದೇಸುನಾಗರಾಜ್, ಅನಿಲ್, ತಮ್ಮಯ್ಯ, ಪ್ರಭು, ರಾಜೇಶ್, ಮೋಹನ್‌ಗೌಡ, ವಿಜಯಕುಮಾರ್, ಕದಿರಪ್ಪ, ವೆಂಕಟೇಗೌಡ, ನಯನ,ಯಶೋದ, ತಾಯಮ್ಮ ಇತರರಿದ್ದರು.
೦೬ ದೇವನಹಳ್ಳಿ ಚಿತ್ರಸುದ್ದಿ: ೦೧
ಚಿತ್ರದುರ್ಗದಲ್ಲಿ ನಡೆಯುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್‌ಗೌಡ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.