ಯಾಂತ್ರಿಕ ಜೀವನದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಗಮನ ಹರಿಸಬೇಕು: ಬಿ.ಎನ್.ಚಂದ್ರಪ್ಪ

KannadaprabhaNewsNetwork |  
Published : Apr 18, 2026, 01:15 AM IST
ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ: | Kannada Prabha

ಸಾರಾಂಶ

ತರೀಕೆರೆಆರೋಗ್ಯವೇ ಭಾಗ್ಯ. ಆರೋಗ್ಯ ಪ್ರತಿಯೊಬ್ಬ ವ್ಯಕ್ತಿಗೂ ಬಹಳ ಮುಖ್ಯವಾದದ್ದು. ಇಂದಿನ ಯಾಂತ್ರಿಕ ಜೀವನದಲ್ಲಿ ನಾವು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಹೇಳಿದರು.

ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ:

ಕನ್ನಡಪ್ರಭ ವಾರ್ತೆ, ತರೀಕೆರೆ

ಆರೋಗ್ಯವೇ ಭಾಗ್ಯ. ಆರೋಗ್ಯ ಪ್ರತಿಯೊಬ್ಬ ವ್ಯಕ್ತಿಗೂ ಬಹಳ ಮುಖ್ಯವಾದದ್ದು. ಇಂದಿನ ಯಾಂತ್ರಿಕ ಜೀವನದಲ್ಲಿ ನಾವು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಹೇಳಿದರು. ಪಟ್ಟಣದ ಶ್ರೀ ತುಂಗಭದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧೂಮಪಾನ ಮತ್ತು ಮದ್ಯಪಾನ ಮಾಡುವುದರಿಂದ ಆರೋಗ್ಯ ಹದಗೆಡುತ್ತದೆ. ಆದ್ದರಿಂದ ಇಂತಹ ಕೆಟ್ಟ ಅಭ್ಯಾಸಗಳನ್ನು ದೂರವಿರಿಸಿ, ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಕರು ಸಮಾಜದ ಮಾರ್ಗದರ್ಶಕರು. ಅವರು ತಮ್ಮ ಜೀವನದಲ್ಲೇ ಉತ್ತಮ ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಪ್ರತಿಯೊಬ್ಬರು ಆರೋಗ್ಯವಂತರಾಗಿರಿ ಎಂದು ಆಶಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಡೀನ್ ಎನ್. ಕೃಷ್ಣಮೂರ್ತಿ ಮಾತನಾಡಿ, ಆರೋಗ್ಯದ ಮಹತ್ವ, ಸಮತೋಲನ ಜೀವನಶೈಲಿ ಹಾಗೂ ಯುವಜನತೆಯಲ್ಲಿ ಆರೋಗ್ಯ ಜಾಗೃತಿ ಅಗತ್ಯತೆ ಕುರಿತು ಮಾತನಾಡಿದರು.ಶ್ರೀ ತುಂಗಭದ್ರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಂದೀಪ್ ಎಲ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಶಿಕ್ಷಣಾರ್ಥಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸಮಾನವಾಗಿ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

17ಕೆಟಿಆರಕ್.ಕೆ.1ಃ ತರೀಕೆರೆಯಲ್ಲಿ ಶ್ರೀ ತುಂಗಭದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಉದ್ಘಾಟಿಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಳ್ಳಕೆರೆಯಲ್ಲಿ 18ರಿಂದ ಬಸವೇಶ್ವರ ಜಯಂತಿ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ