ಏಡ್ಸ್ ಕುರಿತು ಯುವ ಸಮೂಹಕ್ಕೆ ಹೆಚ್ಚಿನ ಜಾಗೃತಿ ಅಗತ್ಯ-ಬಿರಾದಾರ

KannadaprabhaNewsNetwork |  
Published : Dec 02, 2025, 02:00 AM IST
1ಎಚ್‌ವಿಆರ್3- | Kannada Prabha

ಸಾರಾಂಶ

ಏಡ್ಸ್ ತಡೆಗಟ್ಟಲು ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಕುರಿತು ಯುವ ಸಮೂಹಕ್ಕೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ಹಾವೇರಿ:ಏಡ್ಸ್ ತಡೆಗಟ್ಟಲು ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಕುರಿತು ಯುವ ಸಮೂಹಕ್ಕೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸ್ಪಂದನಾ ಐಟಿ, ಸಂಜೀವಿನಿ ಐಟಿ ಮತ್ತು ರಕ್ಷಿತಾ ನೆಟ್‌ವರ್ಕ್ ಹಾಗೂ ಜಿಲ್ಲೆಯ ಪದವಿ ಮತ್ತು ವೃತ್ತಿಪರ ಕಾಲೇಜುಗಳ ಎನ್.ಎಸ್.ಎಸ್. ರೆಡ್ ರಿಬ್ಬನ್ ಕ್ಲಬ್‌ಗಳು ಮತ್ತು ಜಿಲ್ಲೆಯ ಸರ್ಕಾರಿ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜರುಗಿದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಏಡ್ಸ್ ರೋಗ ತಾಯಿಯ ಎದೆಹಾಲಿನಿಂದ, ರಕ್ತ ಹಾಗೂ ಲೈಂಗಿಕ ಸಂಪರ್ಕದಿಂದ ಹರಡುತ್ತದೆ. ಈಗ ರಕ್ತವನ್ನು ಪರೀಕ್ಷಿಸಿ ನೀಡಲಾಗುತ್ತದೆ, ರಕ್ತದಿಂದ ಬರುವ ಸಾಧ್ಯತೆ ಬಹಳ ಕಡಿಮೆ ಇದೆ. ಹಾಗಾಗಿ ಹೆಚ್ಚಿನ ಜನರೊಂದಿಗೆ ಲೈಂಗಿಕ ಸಂಪರ್ಕ ಇಟ್ಟುಕೊಳ್ಳಬಾರದು. ಈ ವಿಷಯಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. 80ರ ದಶಕದಲ್ಲಿ ಏಡ್ಸ್ ಕಾಣಿಸಿಕೊಂಡಿತು, ಆಗ ಏಡ್ಸ್ ಎಂದರೇನು, ಎಚ್‌ಐವಿ ಎಂದರೇನು ಎಂದು ಅರಿವು ಇರಲಿಲ್ಲ. ಈಗ ಏಡ್ಸ್ ರೋಗದ ಬಗ್ಗೆ ಆರೋಗ್ಯ ಇಲಾಖೆಯಿಂದ ಅರಿವು ಮೂಡಿಸಲಾಗುತ್ತಿದೆ. ಎಚ್‌ಐವಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದರು.ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ನೀಲೇಶ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ 2002ರಿಂದ ಈವರೆಗೆ 8,88,548 ಸಾಮಾನ್ಯ ಜನರನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 9,645 ಎಚ್‌ಐವಿ ಸೋಕಿತರನ್ನು ಪತ್ತೆಹಚ್ಚಲಾಗಿದೆ. 6,38,598 ಗರ್ಭಿಣಿ ಸ್ತ್ರೀಯರನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 688 ಗರ್ಭಿಣಿಯರು ಎಚ್‌ಐವಿ ಸೋಂಕಿತರಾಗಿದ್ದಾರೆ. ಜಿಲ್ಲಾ ಆಸ್ಪತ್ರೆ ಎಆರ್‌ಟಿ ಕೇಂದ್ರದಲ್ಲಿ 7,671 ಎಚ್‌ಐವಿ ಸೋಂಕಿತರು ನೋಂದಾಯಿಸಿಕೊಂಡಿದ್ದು, 7,671 ಸೋಂಕಿತರಿಗೆ ಎ.ಆರ್.ಟಿ.ಚಿಕಿತ್ಸೆ ಆರಂಭಿಸಲಾಗಿದೆ. ಪ್ರಸ್ತುತ 4438 ಎಚ್.ಐ.ವಿ.ಸೋಂಕಿತರು ಎ.ಆರ್.ಟಿ. ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಾನಂದ ಎಂ. ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಆಶಾಕಿರಣ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಡಾ. ಬಸವರಾಜ ಓಲೇಕಾರ, ರಕ್ತ ಸಂಗ್ರಹಣಾ ಕೇಂದ್ರದ ಡಾ. ಬಸವರಾಜ ತಳವಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ ಇತರರು ಇದ್ದರು. ಸುಧಾಕರ ದೈವಜ್ಞ ಸ್ವಾಗತಿಸಿದರು. ವಿರಾಜ ಸುಣಗಾರ ನಿರೂಪಿಸಿದರು. ಎಚ್‌ಐವಿ ತಡೆಗಟ್ಟುವಿಕೆಯಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಚ್.ಐ.ವಿ/ಏಡ್ಸ್ ತಡೆಗಟ್ಟುವಿಕೆಯಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಜಿಲ್ಲೆಯಲ್ಲಿ ಹೆಚ್ಚು ಪಾಸಿಟಿವ್ ಹೆರಿಗೆ ಮತ್ತು ಮಕ್ಕಳ ಶಸ್ತ್ರಚಿಕಿತ್ಸೆ ಮಾಡಿಸಿದ ಡಾ. ಬಸವರಾಜ ಓಲೇಕಾರ, ರಕ್ತನಿಧಿ ಕೇಂದ್ರದ ಕಿರಣಕುಮಾರ ಲಕ್ಕಣ್ಣನವರ, ಎ,ಆರ್.ಟಿ. ಕೇಂದ್ರದ ವೈಜಶ್ರೀ ಹಿರೇಮಠ, ಉತ್ತಮ ಎಇಸಿ ರಾಮಗೌಡ ರಾಮನಗೌಡ್ರ, ಉತ್ತಮ ಪ್ಲಾಶ್ ಮಾಬ್ಸ್ ಹಿರೇಕೆರೂರು ಬಿ.ಆರ್.ತಂಬಾಕದ ಪದವಿ ಕಾಲೇಜು, ಉತ್ತಮ ಆರ್.ಆರ್.ಸಿ.ಕಾಲೇಜು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉತ್ತಮ ಐಸಿಟಿಸಿ, ಎಚ್.ಐ.ವಿ.ನಿಯಂತ್ರಣದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಸ್ಪಂದನಾ ಮಹಿಳಾ ಒಕ್ಕೂಟ, ಸಂಜೀವಿನಿ ಎಂ.ಎಸ್.ಎಂ. ಹಾಗೂ ರಕ್ಷಿತಾ ಪಾಸಿಟಿವ್ ಪೀಪಲ್ ನೆಟ್‌ವರ್ಕ್ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ
ರಾಜ್ಯ ರಾಜಕೀಯ ವಿಚಾರ : ಹೊಸ ಬಾಂಬ್ ಸಿಡಿಸಿದ ಎಚ್.ಡಿ.ಕುಮಾರಸ್ವಾಮಿ