ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಬಸ್ ಸೇವೆ ಅಗತ್ಯ: ಶಾಸಕ ಡಾ ಚಂದ್ರು ಲಮಾಣಿ

KannadaprabhaNewsNetwork |  
Published : Jun 07, 2026, 02:15 AM IST
ಪೊಟೋ-ಪಟ್ಟಣದ ಬಸ್ ನಿಲ್ದಾಣದಲ್ಲಿ ನೂತನವಾಗಿ ಬಂದ್ ಬಸ್‌ಗಳಿಗೆ ಶಾಸಕ ಡಾ.ಚಂದ್ರು ಲಮಾಣಿ ಹಸಿರು ನಿಶಾನೆ ತೋರಿಸುವ ಮೂಲಕ ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಿದರು.  | Kannada Prabha

ಸಾರಾಂಶ

ನಮ್ಮ ಸಾರಿಗೆ ಘಟಕಗಳಿಗೆ ನೂತನ ಬಸಗಳ ಅವಶ್ಯಕತೆ ಬಹಳ ಇದೆ. ಅದಕ್ಕಾಗಿ ಹೆಚ್ಚಿನ ಬಸ್‌ಗಳು ಬರಬೇಕು ಎಂದು ಶಾಸಕ ಡಾ ಚಂದ್ರು ಲಮಾಣಿ ಹೇಳಿದರು.

ಲಕ್ಷ್ಮೇಶ್ವರ: ನಮ್ಮ ಸಾರಿಗೆ ಘಟಕಗಳಿಗೆ ನೂತನ ಬಸಗಳ ಅವಶ್ಯಕತೆ ಬಹಳ ಇದೆ. ಅದಕ್ಕಾಗಿ ಹೆಚ್ಚಿನ ಬಸ್‌ಗಳು ಬರಬೇಕು ಎಂದು ಶಾಸಕ ಡಾ ಚಂದ್ರು ಲಮಾಣಿ ಹೇಳಿದರು.

ಶನಿವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಎರಡು ನೂತನ ಬಸ್‌ಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದರು.

ಈಗಾಗಲೇ ಬಂದ ನೂತನ ಬಸ್‌ಗಳು ಹೆಚ್ಚಾಗಿ ಗ್ರಾಮೀಣ ಭಾಗಕ್ಕೆ ಸೇವೆ ನೀಡಬೇಕು. ಅದೇ ರೀತಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಬೆಳಗ್ಗೆ 8ರಿಂದ ಪಂಪ್ ಸರ್ಕಲ್‌ನಿಂದ ಬಸ್ ನಿಲ್ದಾಣ, ಎಂಜಿನಿಯರಿಂಗ್ ಕಾಲೇಜು ವರೆಗೆ ಬಸ್ ಓಡಿಸಬೇಕು. ಬೆಳಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್‌ಗಳನ್ನು ಓಡಿಸಬೇಕು. ಈ ಕುರಿತು ಸಾರಿಗೆ ಘಟಕದ ವ್ಯವಸ್ಥಾಪಕರು ಚಿಂತನೆ ಮಾಡಬೇಕು. ಸಾರ್ವಜನಿಕರು ಹವಾನಿಯಂತ್ರಿತ ಬಸ್‌ಗಳ ಬೇಡಿಕೆ ಇಟ್ಟಿದ್ದು ಅದು ಕಾರ್ಯ ರೂಪಕ್ಕೆ ಬರುತ್ತದೆ ಎಂದು ಹೇಳಿದರು.

ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಹೆಣ್ಣುಮಕ್ಕಳಿಗೆ ಹೆಚ್ಚು ಅನುಕೂಲವಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಪವಿತ್ರ ಕ್ಷೇತ್ರಗಳ ದರ್ಶನ ಮಾಡಲು ಅನುಕೂಲವಾಗಿದೆ ಎಂದು ಹೇಳಿದ ಅವರು ವಿದ್ಯಾರ್ಥಿಗಳಿಗೆ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಘಟಕ ವ್ಯವಸ್ಥಾಪಕಿ ಸವಿತಾ ಆದಿ, ಎಸ್.ಪಿ. ಬಳಿಗಾರ, ಶಿವರಾಜಗೌಡ ಪಾಟೀಲ, ಬಸವರಾಜ ಚಕ್ರಸಾಲಿ, ಗಿರೀಶ ಚೌರಡ್ಡಿ, ಗೀತಾ ಭೀರಣ್ಣವರ, ಶಶಿಕಲಾ ಬಡಿಗೇರ, ಕಲ್ಲಪ್ಪ ಗಂಗಣ್ಣವರ, ಮಂಜುನಾಥ ಶೇರಸೂರಿ, ಮಲ್ಲೇಶಪ್ಪ ಬಸಾಪುರ, ಸೋಮಣ್ಣ ಬಂಗಿ, ಯಲ್ಲಪ್ಪ ಹಂಜಗಿ, ಹರೀಶ ಲಕ್ಷ್ಮೇಶ್ವರ, ರಂಜಾನ್ ಸಾಬ್ ನದಾಫ್ ಸೇರಿದಂತೆ ಗ್ಯಾರಂಟಿ ಸಮಿತಿ ಸದಸ್ಯರು, ಬಸ್ ಚಾಲಕರು ನಿರ್ವಾಹಕರು, ಡಿಪೋ ಸಿಬ್ಬಂದಿ ಅನೇಕರು ಇದ್ದರು.

ಅಧಿಕಾರಿಗಳು ದಕ್ಷತೆ, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿ

ಲಕ್ಷ್ಮೇಶ್ವರ: ಅಧಿಕಾರಿಗಳು ಕರ್ತವ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.ಶನಿವಾರ ಪಟ್ಟಣದ ತಾಪಂ ಕಚೇರಿಗೆ ಸರ್ಕಾರದಿಂದ ನೀಡಿರುವ ನೂತನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.ಅಧಿಕಾರಿಗಳು ಸಾರ್ವಜನಿಕ ಜೀವನದಲ್ಲಿ ಶಿಸ್ತು ಮತ್ತು ಕರ್ತವ್ಯ ಪ್ರಜ್ಞೆ ರೂಢಿಸಿಕೊಳ್ಳಬೇಕು. ತಾಲೂಕಿನ ಜನರ ಸಮಸ್ಯೆಗಳಿಗ ತಕ್ಷಣವೇ ಸ್ಪಂದಿಸಿ ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾರ್ಯ ಮಾಡಬೇಕು. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಎಡತಾಕುವಂತೆ ಮಾಡಬಾರದು. ಅಧಿಕಾರಿಗಳು ನೂತನ ವಾಹನವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಬೇಕು ಎಂದು ಹೇಳಿದರು.

ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ, ಸಹಾಯಕ ನಿರ್ದೇಶಕ ಕೃಷ್ಣಪ್ಪ ಧರ್ಮರ, ನಿಂಗಪ್ಪ ಬನ್ನಿ, ಗಿರೀಶ ಚೌರಡ್ಡಿ, ಬಸವರಾಜ ಚಕ್ರಸಾಲಿ, ಭೀಮಣ್ಣ ಯಂಗಾಡಿ ಹಾಗೂ ತಾಪಂನ ಅಧಿಕಾರಿ ವರ್ಗ ಸೇರಿದಂತೆ ಹಲವರು ಇದ್ದರು,

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಟ್ಕಳದಲ್ಲಿ ಅರ್ಧ ತಾಸು ಸತತ ಮಳೆ: ಹೊಳೆಯಾದ ಮುಖ್ಯರಸ್ತೆ
ಯಡ್ತಾರೆ-ಕಬ್ಬರ್ಗಿಗೆ ರಸ್ತೆ, ಬಸ್ ಸೌಕರ್ಯ ಕಲ್ಪಿಸಲು ಒತ್ತಾಯ