ಎಲ್ಲ ಬೂತ್‌ಗಳಲ್ಲಿ ಪ್ರಚಾರಕ್ಕೆ ಹೆಚ್ಚಿನ ಒತ್ತು: ದೀಪಕ್ ಕುಮಾರ್ ಶೆಟ್ಟಿ

KannadaprabhaNewsNetwork |  
Published : May 03, 2024, 01:08 AM IST
ದೀಪಕ್2 | Kannada Prabha

ಸಾರಾಂಶ

ಬಿಜೆಪಿ ಬೈಂದೂರು ಮಂಡಲ ಕಚೇರಿಯಲ್ಲಿ ಪಕ್ಷದ ಪ್ರಮುಖರ ಸಭೆಏರ್ಪಡಿಸಲಾಗಿತ್ತು. 2ನೇ ಸುತ್ತಿನ ಮನೆ ಮನೆ ಪ್ರಚಾರ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಲೀಡ್ ಕೊಡಿಸಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿನೂತನ ಹಾಗೂ ಪರಿಣಾಮಕಾರಿ ಕಾರ್ಯ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕರೆ ನೀಡಿದರು.

ಅವರು ಬಿಜೆಪಿ ಬೈಂದೂರು ಮಂಡಲ ಕಚೇರಿಯಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತೆಗ್ಗರ್ಸೆ, ಬೈಂದೂರು, ಯಡ್ತರೆ ಮತ್ತು ಪಡುವರಿಯ 26 ಬೂತ್ ಗಳ ಅಧ್ಯಕ್ಷರು, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಭಾರಿ ಅಶೋಕ್ ಮೂರ್ತಿ ಮಾತನಾಡಿ 2ನೇ ಸುತ್ತಿನ ಮನೆ ಮನೆ ಪ್ರಚಾರ ಹಾಗೂ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಈ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಹಾಶಕ್ತಿ ಕೇಂದ್ರದ ಪ್ರಭಾರಿ ಸುರೇಶ್ ಬಟ್ವಾಡಿ, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗೋಪಾಲಕೃಷ್ಣ ಕಲ್ಮಕ್ಕಿ, ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ಸಂಜೀವ ಮೊಗವೀರ, ನಾರಾಯಣ ದೇವಾಡಿಗ, ಕೃಷ್ಣ ದೇವಾಡಿಗ, ಸುಕೇಶ್ ಪೂಜಾರಿ, ದಿವಾಕರ್ ಶೆಟ್ಟಿ ನೆಲ್ಯಾಡಿ, ವಿಠಲ್ ಶೆಟ್ಟಿ, ಬೂತ್ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಇಂದು ರೋಡ್ ಶೋ - ಬಿಎಸ್ ವೈ, ಅಣ್ಣಾಮಲೈ, ಬಿವೈಆರ್ ಭಾಗಿ: ಇಂದು (ಮೇ 3ರಂದು) ಬೆಳಗ್ಗೆ 10 ಗಂಟೆಗೆ ಯಡ್ತರೆ ಜಂಕ್ಷನ್ ನಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮತ್ತು ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಬೃಹತ್ ರೋಡ್ ಶೋ ಕುರಿತು ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ