ದೇವರಾಜು ಕಪ್ಪಸೋಗೆಕನ್ನಡಪ್ರಭ ವಾರ್ತೆ ಚಾಮರಾಜನಗರಕಳೆದ 2025ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ಘೋಷಣೆ ಮಾಡಲಾಗಿದ್ದ ಈಜುಕೊಳ ಹಳ್ಳ ಹಿಡಿದಿದ್ದು, ಸ್ವಯಂ ಚಾಲಿತ ಪರೀಕ್ಷಾ ಪಥಕ್ಕೆ ದಾರಿಯೇ ಕಾಣದಾಗಿದೆ.
ಪರೀಕ್ಷಾ ಪಥ ಕನಸು ಮಾತ್ರ:
2025-26ನೇ ಸಾಲಿನಲ್ಲಿ ಚಾಮರಾಜನಗರದಲ್ಲಿ ಆರ್‌ಟಿಓ (ಪ್ರಾದೇಶಿಕ ಸಾರಿಗೆ ಕಚೇರಿ)ಯಲ್ಲಿ ಮಾನವ ಹಸ್ತಕ್ಷೇಪವಿಲ್ಲದೆ, ಸೇವೇಕದಕಗಳ ಮೂಲತ ವಾಹನ ಚಾಲನೆ ಪರವಾನಗಿ ನೀಡಲು ₹20 ಕೋಟಿ ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಲಾಗಿತ್ತು. ಆದರೆ ಇದುವರಗೆ ಸ್ವಯಂ ಚಾಲಿತ ಪರೀಕ್ಷಾ ಪಥ ನಿರ್ಮಾಣ ಕಾರ್ಯ ಆರಂಭವಾಗಿಲ್ಲ.ಬುಡಕಟ್ಟು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದರ ಪೈಕಿ ಹನೂರು ತಾಲೂಕಿನ ನಕ್ಕುಂದಿ ವಸತಿ ಶಾಲೆಯನ್ನು ಗುರುತಿಸಲಾಗಿಸಲಾಗಿದ್ದು, ಇದು ಪ್ರಾರಂಭವಾಗಬೇಕಾದರೆ ಇನ್ನೂ ನಾಲ್ಕೈದು ವರ್ಷಗಳಾದ್ರು ಬೇಕಾಗಿದೆ.
ಆರೋಗ್ಯ ಕೇಂದ್ರ ಮೇಲ್ದರ್ಜೆಗೆ:ಹೊಸದಾಗಿ ಘೋಷಣೆಯಾಗಿರುವ ಹನೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಈ ನಿಟ್ಟಿನಲ್ಲಿ ಜಾಗ ಗುರುತಿಲಾಗಿದ್ದು, ಶಾಸಕ ಎಂ.ಆರ್. ಮಂಜುನಾಥ್ ಅವರು ಇತ್ತೀಚಿಗೆ ಗುದ್ದಲಿ ಪೂಜೆ ಮಾಡಿದ್ದಾರೆ.
---4ಸಿಎಚ್ಎನ್11ಹನೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಗುರುತಿಸಿ ಶಂಕುಸ್ಧಾಪನೆ ಮಾಡಲಾಗಿರುವ ಸ್ಧಳದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಮತ್ತು ಅಧಿಕಾರಿವರ್ಗದವರು.
ಕನ್ನಡಪ್ರಭ ವಾರ್ತೆ ಚಾಮರಾಜನಗರಕೃಷಿಯೊಂದಿಗೆ ಪರಿಸರ ಮತ್ತು ಧಾರ್ಮಿಕ ಪ್ರವಾಸೋದ್ಯಮವನ್ನು ಬಹುವಾಗಿ ನೆಚ್ಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಜನರ ಚಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6ರಂದು ಮಂಡಿಸಲಿರುವ ರಾಜ್ಯ ಬಜೆಟ್ ಮೇಲೆ ನೆಟ್ಟಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಗರ, ಪಟ್ಟಣ, ಗ್ರಾಮಾಂತರ ಭಾಗಗಳಲ್ಲಿ ಇಂದಿಗೂ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಜಿಲ್ಲಾ ಕೇಂದ್ರದಲ್ಲೇ ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ನಿರೀಕ್ಷಿತ ಪ್ರಗತಿಯಾಗಿಲ್ಲ. ಪ್ರವಾಸಿತಾಣಗಳಿಗೆ ಸಮರ್ಪಕ ಸಾರಿಗೆ ಸಂಪರ್ಕ, ಕುಡಿಯುವ ನೀರು, ಶೌಚಾಲಯ, ವಾಸ್ತವ್ಯ ಹಾಗೂ ಆತಿಥ್ಯಕ್ಕೆ ವಸತಿಗೃಹ ಹಾಗೂ ಹೋಟೆಲ್‌ಗಳ ಅಲಭ್ಯತೆಯಿಂದ ಪ್ರವಾಸಿಗರನ್ನು ಸೆಳೆಯಲು ವಿಫಲವಾಗಿದ್ದು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕಿದೆ.
ಚಾಮರಾಜನಗರದ ಜಿಲ್ಲಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಜೊತೆಗೆ ತಾಲೂಕು ಮಟ್ಟದ ಕ್ರೀಡಾಂಗಣಗಳ ಅಭಿವೃದ್ಧಿ ಹನೂರು ಮತ್ತು ಯಳಂದೂರು ತಾಲೂಕಿನಲ್ಲಿ ಕ್ರಿಡಾಂಗಣ ನಿರ್ಮಾಣಕ್ಕಾಗಿ ಸ್ಧಳ ನೀಡಬೇಕಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡದ ಪರಿಣಾಮ ಉದೋಗಕ್ಕಾಗಿ ನೆರೆ ಜಿಲ್ಲೆಗೆ ಜನರು ವಲಸೆ ಹೋಗುತ್ತಿದ್ದು, ಇದನ್ನು ತಪ್ಪಿಸುವ ಸಲುವಾಗಿ ಚಾಮರಾಜನಗರ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಿನ ಕೈಗಾರಿಕೆ ಸ್ಧಾಪನೆ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ನೀಡುವ ಮೂಲಕ ತಾಲೂಕು ಕೇಂದ್ರಗಳಿಗೂ ಕೈಗಾರಿಕೆ ವಿಸ್ತರಣೆ ಮಾಡಲು ಮುಂದಾಗಬೇಕಿದೆ.
ಹೊಸ ತಾಲೂಕಿಗೆ ಹೆಚ್ಚಿನ ಕಾಳಜಿ ಬೇಕು:ತಾಲ್ಲೂಕು ಘೋಷಣೆಯಾಗಿ 8 ವರ್ಷ ಕಳೆದರೂ ಇದುವರೆಗೂ ಪೂರ್ಣ ಪ್ರಮಾಣದ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿಲ್ಲ. ಹಾಲಿ ಇರುವ ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅರಣ್ಯದಂಚಿನ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲದ ಪರಿಣಾಮ ಸ್ಥಳಾಂತರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿದೆ.
ಡಿಸಿಸಿ ಬ್ಯಾಂಕ್, ಅಂಚೆ ಕಚೇರಿ ಬೇಕು:ಚಾಮರಾಜನಗರ ಜಿಲ್ಲಾ ಕೇಂದ್ರವಾಗಿ 28 ವರ್ಷ ಕಳೆಯುತ್ತಾ ಬಂದಿದ್ದರೂ ಇದುವರಗೆ ಜಿಲ್ಲಾ ಸಹಕಾರ ಬ್ಯಾಂಕ್ ಸ್ಧಾಪನೆಯಾಗಿಲ್ಲ. ಜಿಲ್ಲಾ ಮಟ್ಟದ ಅಂಚೆ ಕಚೇರಿಯೂ ಸ್ಧಾಪನೆಯಾಗಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದ ಅಭಿವೃದ್ಧಿ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್, ಜಿಲ್ಲಾ ಮಟ್ಟದ ಅಂಚೆ ಕಚೇರಿ ತೆರೆಯಬೇಕಿದೆ.ಜಿಲ್ಲೆಯಲ್ಲಿ ಐದು ತಾಲ್ಲೂಕುಗಳಿದ್ದು, ಕೊಳ್ಳೇಗಾಲ ಉಪ ವಿಭಾಗ ಮಾತ್ರ ಒಂದೇ ಅಸ್ತಿತ್ವದಲ್ಲಿರುವುದರಿಂದ ಚಾಮರಾಜನಗರ, ಗುಂಡ್ಲುಪೇಟೆ ತಾಲೂಕಿನವರು ಸರ್ಕಾರದ ಕೆಲಸ ಕಾರ್ಯಗಳಿಗೆ ಕೊಳ್ಳೇಗಾಲ ಉಪ ವಿಭಾಗ ಕಚೇರಿಗೆ ಅಲೆಯಬೇಕಾಗಿದೆ. ಜಿಲ್ಲಾ ಕೇಂದ್ರ ಚಾಮರಾಜನಗರ ಒಳಗೊಂಡ ಉಪವಿಭಾಗ ರಚನೆ ಮಾಡಿದರೆ ಹೆಚ್ಚು ಅನುಕೂಲವಾಗಲಿದೆ ಎಂಬ ಬೇಡಿಕೆ ಇದೆ.