ಕನ್ನಡಪ್ರಭ ವಾರ್ತೆ ಬೆಳಗಾವಿ
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿಯೊಬ್ಬ ತಹಸೀಲ್ದಾರರು ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು. ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಲ್ಲಿ ಊಟ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೃಷಿ ಹಾಗೂ ತೋಟಗಾರಿಕೆ ಬೆಳೆಹಾನಿ ಬಗ್ಗೆ ಸಮರ್ಪಕವಾಗಿ ಪರಿಶೀಲನೆ ನಡೆಸಬೇಕು. ರಸ್ತೆಗಳ ಹಾನಿಯ ಸಮೀಕ್ಷೆ ನಡೆಸಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಅಧಿಕಾರಿಗಳು ರಜೆ ತೆರಳದೇ ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡಬೇಕು ಎಂದು ವಿಪುಲ್ ಬನ್ಸಾಲ್ ನಿರ್ದೇಶನ ನೀಡಿದರು.ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ:
ನೆರೆಯ ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆ ಹಾಗೂ ರಾಜ್ಯದ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಜಲಾಶಯಗಳ ಜಲಮಟ್ಟವನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಷನ್ ತಿಳಿಸಿದರು.
ಜಿಪಂ ಸಿಇಒ ರಾಹುಲ್ ಶಿಂಧೆ, ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದಲ್ಲಿರುವ ಕೆಲವೇ ಕೆಲವು ವಸತಿ ಪ್ರದೇಶಗಳನ್ನು ಹೊರತುಪಡಿಸಿದರೆ ಜಿಲ್ಲೆಯ ಯಾವುದೇ ಸ್ಥಳಕ್ಕೂ ತಕ್ಷಣವೇ ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ನೆರವು ತಲುಪಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಜನರ ಸುರಕ್ಷತೆ ದೃಷ್ಟಿಯಿಂದ ಗೋಕಾಕ್ ಫಾಲ್ಸ್ ಸೇರಿದಂತೆ ಕೆಲವು ಫಾಲ್ಸ್‌ಗಳ ಸಮೀಪ ತೆರಳಲು ನಿರ್ಬಂಧಿಸಲಾಗಿದೆ. ಇದಲ್ಲದೇ ಮುಳುಗಡೆಯಾಗಿರುವ ಕೆಳಹಂತದ ಸೇತುವೆಗಳ ಮೇಲೆ ಜನ ಮತ್ತು ವಾಹನ ಸಂಚಾರ ತಡೆಗೆ ಬ್ಯಾರಿಕೇಡ್ ಅಳವಡಿಸಿ ಸಿಬ್ಬಂದಿ ನಿಯೋಜಿಸಲಾಗಿದೆ. ಮುಳುಗಡೆಯಾಗಿರುವ ಕೆಲವು ಸೇತುವೆಗಳು ಸದ್ಯಕ್ಕೆ ಸಂಚಾರಕ್ಕೆ ಮುಕ್ತವಾಗಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕೋಟ್
- ಮೊಹಮ್ಮದ್ ರೋಷನ್, ಜಿಲ್ಲಾಧಿಕಾರಿ,.
---------------------------------------ಬಾಕ್ಸ್.......
ಹಣದ ಕೊರತೆ ಇದ್ದರೆ ತಿಳಿಸಿಕಾಳಜಿ ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು. ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಜಲಾಶಯಗಳಿಂದ ನೀರು ಬಿಡುಗಡೆ ವೇಳೆ ಬ್ಯಾರೇಜ್‌ಗಳನ್ನು ನಿರ್ವಹಿಸುವ ಇಲಾಖೆಗಳು ಪರಸ್ಪರ ಸಮನ್ವಯತೆ ಕಾಯ್ದುಕೊಳ್ಳುವ ಮೂಲಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವುದರಿಂದ ಜನರ ಪ್ರಾಣ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ವಿಪತ್ತು ನಿರ್ವಹಣೆ ಸಂಬಂಧ ಈಗಾಗಲೇ ತಹಸೀಲ್ದಾರ್‌ಗಳ ಖಾತೆಯಲ್ಲಿ ಸಾಕಷ್ಟು ಹಣವಿದೆ. ಒಂದು ವೇಳೆ ಹಣದ ಕೊರತೆ ಇದ್ದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆಯನ್ನು ನೀಡಿದರು.