ಕೊಪ್ಪಳ:
ತಾಲೂಕಿನ ಅಳವಂಡಿ ಗ್ರಾಮದಲ್ಲಿ ₹ 22 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ವಸತಿ ಕಟ್ಟಡ ನಿರ್ಮಾಣ, ₹ 42 ಲಕ್ಷ ವೆಚ್ಚದಲ್ಲಿ ನೂತನ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣದ ಕಾಮಗಾರಿ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಕೊಪ್ಪಳ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ನೀಡಲಾಗಿದೆ. ಅನೇಕ ವಸತಿ ಶಾಲೆಗಳನ್ನು ಕ್ಷೇತ್ರಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ಇನ್ನೂ ಎರಡು ಅಂಬೇಡ್ಕರ್ ವಸತಿ ಶಾಲೆಗಳು ಮಂಜೂರಾತಿ ಆಗುವ ಹಂತದಲ್ಲಿವೆ. ಮೊರಾರ್ಜಿ ವಸತಿ ಶಾಲೆಯಲ್ಲಿ ಕೂಡ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚುತ್ತಿರುವುದರಿಂದ ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿಯಾಗಿ ಇನ್ನೂ 2 ಮೊರಾರ್ಜಿ ವಸತಿ ಶಾಲೆಗಳನ್ನು ಕ್ಷೇತ್ರಕ್ಕೆ ನೀಡುವಂತೆ ಮನವಿ ಮಾಡಿದ್ದೇನೆ. ಅವರು ನನ್ನ ಮನವಿಗೆ ಸ್ಪಂದಿಸಿದ್ದು, ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದರು.ಶೀಘ್ರ ಅಡಿಗಲ್ಲು:
ರಸ್ತೆ ನಿರ್ಮಾಣ:
ಈ ವೇಳೆ ಮರುಳರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಂಸದ ಸಂಗಣ್ಣ ಕರಡಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಪ್ರಸನ್ನ ಗಡಾದ, ಭರಮಪ್ಪ ನಗರ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಾಲಚಂದ್ರನ ಮುನಿರಾಬಾದ್, ಗಾಳೆಪ್ಪ ಪೂಜಾರ, ಹನುಮೇಶ ಹೊಸಳ್ಳಿ, ಭೀಮಣ್ಣ ಬೋಚನಹಳ್ಳಿ, ದೇವಪ್ಪ ಹಳ್ಳಿ, ಗುರು ಬಸವರಾಜ್ ಹಳ್ಳಿಕೇರಿ, ಅನ್ವರ್ ಗಡಾದ, ಚೌಡಪ್ಪ ಜಂತಲಿ, ಸುರೇಶ ದಾಸರೆಡ್ಡಿ, ತಹಸೀಲ್ದಾರ್ ವಿಠ್ಠಲ ಚೌಗಲೆ, ತಾಪಂ ಇಒ ದುಂಡೇಶ್ ತುರಾದಿ, ನಗರಸಭೆ ಸದಸ್ಯ ಅಕ್ಬರ್ ಪಲ್ಟಾನ್ ಉಪಸ್ಥಿತರಿದ್ದರು.