ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಗೃಹ ಕಚೇರಿಯಲ್ಲಿ ತಿಕೋಟಾ ಪಟ್ಟಣದ ತಳವಾರ ಸಮುದಾಯದ ನಾನಾ ಮುಖಂಡರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಂಡು ಗುರುವಾರ ಮಾತನಾಡಿದ ಅವರು, ಮತಕ್ಷೇತ್ರದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಯೋಜನೆಗಳು ಸಕಲ ಸಮುದಾಯಗಳ ಮೆಚ್ಚುಗೆಗೆ ಪಾತ್ರವಾಗಿದೆ. ತಿಕೋಟಾ ತಳವಾರ ಸಮುದಾಯದ ಪ್ರಮುಖ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಬಬಲೇಶ್ವರ ಮತಕ್ಷೇತ್ರದಲ್ಲಿ ಇಂದು ರಾಜಕೀಯ ಚಿತ್ರಣವೇ ಬದಲಾಗಿದೆ. ನುಡಿದಂತೆ ನಡೆಯುವ ನಮ್ಮ ಗ್ಯಾರಂಟಿ ಸರ್ಕಾರದ ಜನಪರ ಆಡಳಿತಕ್ಕೆ ಮನಸೋತು, ಬಿಜೆಪಿಯ ಪ್ರಮುಖರು, ಕಾರ್ಯಕರ್ತರು ತಮ್ಮ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್‌ಗೆ ಜೈ ಎಂದಿದ್ದಾರೆ. ನಮ್ಮ ಅಭಿವೃದ್ಧಿಯ ಹಾದಿ ಮತ್ತು ಗಟ್ಟಿಯಾದ ಸಿದ್ಧಾಂತವನ್ನು ನಂಬಿ ಬಂದ ಈ ಎಲ್ಲಾ ನಾಯಕರನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಅವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಮುಂಬರುವ ದಿನಗಳಲ್ಲಿ ಅವರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ತೊರವಿ, ಎಚ್.ಎಲ್.ತಳವಾರ, ಪರಶುರಾಮ ಕೋಳಿ, ಗಣಪತಿ ತೋರವಿ, ಅಪ್ಪಸಾಹೇಬ ದ್ಯಾಬೇರಿ, ದಯಾನಂದ ಶಿರಹಟ್ಟಿ, ಪ್ರಕಾಶ ಹಾಲಳ್ಳಿ, ಭೀಮು ಹಾಲಳ್ಳಿ, ರಮೇಶ ಗುಡದಿನ್ನಿ, ವಿಲಾಸ ಮಾಳಿ, ನಾಗಪ್ಪ ಮಾಳಿ, ಶಾಂತಾಬಾಯಿ ತಳವಾರ, ಗೀತಾ ತೋರವಿ, ಪುಷ್ಪಾ ತೋರವಿ, ಮಂಗಲಾ ತಳವಾರ, ಮನಿಷಾ ತಳವಾರ, ಕವಿತಾ ಹಾಲಳ್ಳಿ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮುಖಂಡತಾದ ಬಿ.ಜಿ.ವಿಭೂತಿ, ಜೆ.ಎಂ.ಪಾಟೀಲ, ಮಮ್ಮು ಮುಜಾವರ, ಬಾಪು ಚೌಧರಿ, ರಾಜೂಗೌಡ ಪಾಟೀಲ, ಬಿ.ಎಲ್.ನಾಟೀಕಾರ ಉಪಸ್ಥಿತರಿದ್ದರು.