ತಾಲೂಕಿನಾದ್ಯಂತ ಗಣೇಶನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸಲಾಗಿದೆ ಅದರಂತೆ ಗ್ರಾಮೀಣ ಪ್ರದೇಶದಲ್ಲಿ 250ಕ್ಕೂ ಹೆಚ್ಚು ಗಣಪತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ಸಾರ್ವಜನಿಕ ಗಣೇಶ ಉತ್ಸವ ಮಹಾಮಂಡಲದ ಅಧ್ಯಕ್ಷ ಸುನೀಲ ಭೋವಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಜಮಖಂಡಿ
ತಾಲೂಕಿನಾದ್ಯಂತ ಗಣೇಶನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸಲಾಗಿದೆ ಅದರಂತೆ ಗ್ರಾಮೀಣ ಪ್ರದೇಶದಲ್ಲಿ 250ಕ್ಕೂ ಹೆಚ್ಚು ಗಣಪತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ಸಾರ್ವಜನಿಕ ಗಣೇಶ ಉತ್ಸವ ಮಹಾಮಂಡಲದ ಅಧ್ಯಕ್ಷ ಸುನೀಲ ಭೋವಿ ತಿಳಿಸಿದ್ದಾರೆ. ಮಹಾ ಮಂಡಲದ ವತಿಯಿಂದ ಸಾರ್ವಜನಿಕ ಗಣೇಶ ಮಂಡಳಿಗಳಿಗೆ ಬಹುಮಾನ ವಿತರಿಸಲಾಗುತ್ತದೆ. ಅಲಂಕಾರ, ವಿಗ್ರಹ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹೀಗೆ ಮೂರು ಆಯಾಮಗಳಲ್ಲಿ ಬಹುಮಾನ ಮತ್ತು ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ. ನಗರಪ್ರದೇಶದಲ್ಲಿ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿಯವರು ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ. ನೋಂದಾಯಿತ ಎಲ್ಲ ಮಂಡಲಿಗಳಿಗೆ ಭೇಟಿ ನೀಡಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಘೋಷಿಸಲಾಗುವುದೆಂದರು.
ಶಾಸಕರು ನಗರ ಪ್ರದೇಶದ ಪ್ರತಿ ಮಂಡಲಿಗೆ ತಲಾ 5 ಸಾವಿರ ರುಪಾಯಿ ಸಹಾಯ ನೀಡಿದ್ದಾರೆ ಎಂದರು. ಗ್ರಾಮೀಣ ಪ್ರದೇಶದ ಮಂಡಲಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸುವರಿಗೆ ಅಕ್ಕಿ ಅಥವಾ ಸಕ್ಕರೆಯನ್ನು ನೀಡುವ ವ್ಯವಸ್ಥೆ ಮಾಡಿದ್ದಾರೆ. ನಗರ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾದ ವ್ಯವಸ್ಥೆಯನ್ನು ಮಾಡುವ ಮಂಡಳಿಯವರು ಪರಸ್ಪರ ಚರ್ಚಿಸಿ ಬೇರೆ ಬೇರೆ ದಿನಗಳಲ್ಲಿ ವ್ಯವಸ್ಥೆ ಮಾಡಬೇಕು. ಒಂದೇ ದಿನ ಎಲ್ಲ ಕಡೆಗಳಲ್ಲಿ ಪ್ರಸಾದ ಮಾಡುವುದರಿಂದ ಭಕ್ತರಿಗೆ ಗೊಂದಲ ಉಂಟಾಗುತ್ತದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.