ಆಯೋಗದಿಂದ 300ಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ: ಡಾ.ಎಲ್‌.ಮೂರ್ತಿ

KannadaprabhaNewsNetwork |  
Published : Feb 18, 2026, 01:30 AM IST
17ಕೆಎಂಎನ್‌ಡಿ-7ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷ ಡಾ. ಎಲ್ ಮೂರ್ತಿ ಸಭೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಮುದಾಯಕ್ಕೆ ಬೇಕಾದ ಸೌಲಭ್ಯಗಳ ಬಗ್ಗೆ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಸೇವೆಗಳನ್ನು ಸಮರ್ಪಕವಾಗಿ ನೀಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಆಯೋಗದ ಕಾನೂನು ಸಲಹೆಗಾರರ ಸಹಾಯದಿಂದ ಸುಮಾರು ೩೦೦ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷ ಡಾ.ಎಲ್ ಮೂರ್ತಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಮೀನು, ನಿವೇಶನ, ಹಕ್ಕು ಪತ್ರ ಸೇರಿದಂತೆ ಇತರೆ ಸಮಸ್ಯೆ ಬಗೆಹರಿಸಬೇಕೆಂದು ಸುಮಾರು ೩೬೬೮ ಅರ್ಜಿಗಳನ್ನು ಆಯೋಗಕ್ಕೆ ಸಲ್ಲಿಸಿದ್ದಾರೆ. ತಹಸೀಲ್ದಾರ್, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಕ ಅಧಿಕಾರಿ, ಪುರಸಭೆ ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಲವಾರು ಪ್ರಕರಣಗಳು ಇತ್ಯಾರ್ಥಗೊಂಡಿವೆ ಎಂದರು.

ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಮುದಾಯಕ್ಕೆ ಬೇಕಾದ ಸೌಲಭ್ಯಗಳ ಬಗ್ಗೆ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಸೇವೆಗಳನ್ನು ಸಮರ್ಪಕವಾಗಿ ನೀಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಾತಿ ಸಂಘರ್ಷ ಸಂಬಂಧಿಸಿದ ಪ್ರಕರಣಗಳನ್ನು ಇತ್ಯಾರ್ಥಪಡಿಸುವಂತೆ ಪೊಲೀಸ್ ಇಲಾಖೆಗೆ ಮೌಖಿಕವಾಗಿ ತಿಳಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಡಿವೈಎಸ್‌ಪಿ ಎಸ್.ಬಿ ಯಶ್ವಂತ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಎಚ್.ಜಿ. ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ ನಾಗರತ್ನ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಇ.ನಂಜಮಣಿ, ಶಿರಸ್ತೇದಾರ್ ಗುರುಪ್ರಸಾದ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌