ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಎಲ್ಲರನ್ನೂ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವುದರೊಂದಿಗೆ ಎಲ್ಲರೂ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಕರೆ ನೀಡಿದರು. ಪಕ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡವರನ್ನು ಉದ್ದೇಶಿಸಿ, ಶತಮಾನಗಳಿಂದ ಜನಪರವಾಗಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಎಲ್ಲರೂ ಪಕ್ಷ ಸಂಘಟಣೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಪ್ರಭು ಸುಬ್ಬಯ್ಯ, ಪ್ರಮುಖರಾದ ಪಲ್ವಿನ್ ಪೂಣಚ್ಚ, ಅಪ್ಪಚ್ಚಂಗಡ ಮೋಟಯ್ಯ, ಕಟ್ಟೇರ ವಿಶ್ವನಾಥ್, ಚೊಟ್ಟೆಯಾಂಡಮಾಡ ಉದಯ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.