ಕನ್ನಡಪ್ರಭ ವಾರ್ತೆ ಮುಧೋಳ
ಶಾಶ್ವತ ಪರಿಹಾರಕ್ಕೆ ಒತ್ತಾಯ:
ತಾತ್ಕಾಲಿಕ ಶೆಡ್‌ಗಳಲ್ಲಿ ವಾಸಿಸುತ್ತಿರುವ ಕುಟುಂಬದವರು ತಮಗೆ ವಾಸಿಸಲು ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಗರಸಭೆ ಮತ್ತು ಕಂದಾಯ ಅಧಿಕಾರಿಗಳು ಶೆಡ್‌ಗಳಲ್ಲಿ ವಾಸಿಸುವ ಕುಟುಂಬಗಳ ವಿವರವನ್ನು ಪಡೆದುಕೊಂಡಿದ್ದಾರೆ.ಮುಧೋಳ ಸಮೀಪ ಹರಿದಿರುವ ಘಟಪ್ರಭೆ ತುಂಬಿ ಹರಿಯುತ್ತಿರುವ ನಯನ ನದಿಯ ನಯನ ಮನೋಹರ ದೃಶ್ಯವನ್ನು ವೀಕ್ಷಿಸಲು ನಗರದ ಜನತೆ ತಂಡೋಪತಂಡವಾಗಿ ಹೋಗುತ್ತಿದ್ದಾರೆ. ಪ್ರವಾಹ ಎದುರಿಸಲು ತಾಲೂಕಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೇ ನದಿ ಪಾತ್ರದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳಿಸಿ, ಅವರ ಕಾಳಜಿ ಮಾಡಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಮುಧೋಳ ಮತ್ತು ಮಾಚಕನೂರ ಸೇತುವೆ ಮೇಲೆ ಜನ ಮತ್ತು ವಾಹನಗಳು ಸಂಚರಿಸದಂತೆ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಯಾವುದೇ ರೀತಿನ ಅವಘಡಗಳು ಆಗದಂತೆ ನೋಡಿಕೊಳ್ಳಲು ಇಲ್ಲಿ ಪೊಲೀಸ್ ಅವರನ್ನು ಕೂಡಾ ನಿಯೋಜಿಸಲಾಗಿದೆ. ಭಾನುವಾರ ಮತ್ತೆ ಹಿಡಕಲ್ ಜಲಾಶಯದಿಂದ ಹೆಚ್ಚುವರಿ ನೀರು ಬಿಟ್ಟಿರುವುದರಿಂದ ಘಟಪ್ರಭೆ ನದಿಯ ನೀರಿನ ಪ್ರಮಾಣ ಮತ್ತೆ ಏರಿಕೆಯಾಗಲಿದೆ. ಇದರಿಂದ ನದಿಪಾತ್ರದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.