600ಕ್ಕೂ ಹೆಚ್ಚು ಕುಟುಂಬಗಳು ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯಿಂದ ವಂಚಿತ: ಮೂಡ್ಲೀಗೌಡ

KannadaprabhaNewsNetwork |  
Published : Apr 28, 2025, 11:48 PM IST
24ಕೆಎಂಎನ್ ಡಿ16 | Kannada Prabha

ಸಾರಾಂಶ

ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವವರ ಪೈಕಿ 200ಮಂದಿ ಫಲಾನುಭವಿಗಳು ಹಣ ಪಡೆಯುತ್ತಿಲ್ಲ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಿಂದ ತಾಲೂಕಿನ ಯಾವೊಬ್ಬ ಅರ್ಹ ಫಲಾನುಭವಿಗಳೂ ಸಹ ವಂಚಿತರಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನಲ್ಲಿ 600ಕ್ಕೂ ಹೆಚ್ಚು ಕುಟುಂಬಗಳು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಿಂದ ವಂಚಿತ. ಇರುವ ತಾಂತ್ರಿಕ ಸಮಸ್ಯೆ ಸರಿಪಡಿಸಿ ಯೋಜನೆ ಸೌಲಭ್ಯ ತಲುಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ ತಿಳಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ತಾಲೂಕಿನ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದೆ ಎಂದರು.

ಶಕ್ತಿ ಯೋಜನೆಯಡಿ ನಾಗಮಂಗಲದಿಂದ ಮೈಸೂರು ಮತ್ತು ಮಂಡ್ಯ ಮಾರ್ಗಗಳಿಗೆ ಸಂಚರಿಸುತ್ತಿರುವ ಸಾರಿಗೆ ಬಸ್‌ಗಳು ಸಾಲುತ್ತಿಲ್ಲ. ಹಾಗಾಗಿ ಈ ಮಾರ್ಗಗಳಿಗೆ ಹೆಚ್ಚುವರಿಯಾಗಿ ಮೂರ್‍ನಾಲ್ಕು ಬಸ್‌ಗಳನ್ನು ಬಿಡುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಮಿತಿ ಸದಸ್ಯರು ತಿಳಿಸಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ ಎಂದರು.

ತಾಲೂಕಿನಲ್ಲಿ 600 ರಿಂದ 700 ಕುಟುಂಬಗಳ ಮುಖ್ಯಸ್ಥ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ 2 ಸಾವಿರ ರು. ತಲುಪದಿರುವ ಬಗ್ಗೆ ಹೋಬಳಿವಾರು ಪಟ್ಟಿ ತಯಾರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಪರಿಶೀಲಿಸಿ ಸಮಸ್ಯೆಯಿದ್ದರೆ ತಕ್ಷಣ ಸರಿಪಡಿಸಿ ಯೋಜನೆ ಹಣ ತಲುಪಿಸಲು ಕ್ರಮವಹಿಸಬೇಕು ಎಂದರು.

ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವವರ ಪೈಕಿ 200ಮಂದಿ ಫಲಾನುಭವಿಗಳು ಹಣ ಪಡೆಯುತ್ತಿಲ್ಲ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಿಂದ ತಾಲೂಕಿನ ಯಾವೊಬ್ಬ ಅರ್ಹ ಫಲಾನುಭವಿಗಳೂ ಸಹ ವಂಚಿತರಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಸಿಡಿಪಿಓ ಕೃಷ್ಣಮೂರ್ತಿ, ಆಹಾರ ನಿರೀಕ್ಷಕ ಅನಿಲ್ ಕುಮಾರ್, ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಮಹೇಶ್, ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಹೇಮಲತಾ ಮತ್ತು ಸೆಸ್ಕಾಂ ಅಧಿಕಾರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ತಾಪಂ ಇಒ ಸತೀಶ್, ಸಮಿತಿಯ ಸದಸ್ಯರಾದ ದಿನೇಶ್, ಶರತ್‌ರಾಮಣ್ಣ, ವಿನಯ್‌ಗೌಡ, ಶ್ರೀಧರ್, ನೀಲಾಮೂರ್ತಿ, ಗೀತಾ, ರವಿಕಾಂತೇಗೌಡ, ನವೀನ್, ತಮ್ಮಣ್ಣಗೌಡ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ