ಕೃಷ್ಣಾನದಿಗೆ ಹೆಚ್ಚಿನ ನೀರು: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

KannadaprabhaNewsNetwork |  
Published : Jul 20, 2024, 12:55 AM IST
19ಕೆಪಿಆರ್‌ಸಿಆರ್‌ 02: ನಿತೀಶ್‌ ಕೆ. | Kannada Prabha

ಸಾರಾಂಶ

ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯ್ತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು

ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿದ್ದು, ಇದರ ಜೊತೆಗೆ ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ವರದಿಯಂತೆ ಇನ್ನೂ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ನಿತೀಶ್ ಕೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಭಾರೀ ಮಳೆ ಅಥವಾ ಪ್ರವಾಹ ಕುರಿತು ಮುಂಜಾಗ್ರತೆ ತೆಗೆದುಕೊಳ್ಳುವುದು ಅವಶ್ಯಕತೆ ಇರುತ್ತದೆ. ಆದುದರಿಂದ ರಾಯಚೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಲ್ಲಿ ಭಾರೀ ಮಳೆ, ಪ್ರವಾಹ ಕುರಿತು ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳು ಈ ಕೆಳಗಿನಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.

ಜಿಲ್ಲಾ, ತಾಲೂಕು, ಹೋಬಳಿ ಅಥವಾ ಗ್ರಾಪಂ ಮಟ್ಟದ ಅಧಿಕಾರಿ ಅಥವಾ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ ಅಥವಾ ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯ್ತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಜಿಲ್ಲೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿ ಅಥವಾ ಸಿಬ್ಬಂದಿಗೆ ಪ್ರವಾಹ/ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲು ಸೂಚಿಸಲಾಗಿದ್ದು, ಈ ವಿಷಯದಲ್ಲಿ ನಿರ್ಲಕ್ಷ್ಯವಹಿಸಿದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ಆಗ್ರಹ
ಸಮಾಜದಲ್ಲಿ ಮಹಿಳೆಯರನ್ನು ಪ್ರಬಲಗೊಳಿಸುವ ಕೆಲಸ ಮಾಡಲಾಗುತ್ತಿದೆ: ಶಾಸಕ