ಮಂಡ್ಯದಲ್ಲಿ ಅತಿ ಹೆಚ್ಚು ರಕ್ತದಾನ ಶಿಬಿರಗಳು: ಎಡಿಸಿ ಡಾ.ಎಚ್.ಎಲ್.ನಾಗರಾಜು

KannadaprabhaNewsNetwork |  
Published : Aug 17, 2024, 12:57 AM IST
15ಕೆಎಂಎನ್ ಡಿ28 | Kannada Prabha

ಸಾರಾಂಶ

ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಸಲ್ಲಿಸುತ್ತಿರುವ ಯುವಕರಿಗೆ, ಸಂಘ- ಸಂಸ್ಥೆಗಳು ಮತ್ತಷ್ಟು ಪ್ರೇರಣೆ ನೀಡಬೇಕು. ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ರಕ್ತದಾನ ಶಿಬಿರಗಳು ಜರುಗುತ್ತಿವೆ. ಮದ್ದೂರು, ಮಳವಳ್ಳಿ ತಾಲೂಕುಗಳು ಮುಂಚೂಣಿ ಸ್ಥಾನದಲ್ಲಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ತಾಲೂಕಿನ 70ಕ್ಕೂ ಹೆಚ್ಚು ವಿವಿಧ ಸಂಘ- ಸಂಸ್ಥೆಗಳಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶ ಕಾಯುವ ಯೋಧರ ಗೌರವಾರ್ಥ ಮತ್ತು ಹುತಾತ್ಮ ಯೋಧರ ಸ್ಮರಣಾರ್ಥ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಸ್ವತಃ ತಾವೇ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಸಲ್ಲಿಸುತ್ತಿರುವ ಯುವಕರಿಗೆ, ಸಂಘ- ಸಂಸ್ಥೆಗಳು ಮತ್ತಷ್ಟು ಪ್ರೇರಣೆ ನೀಡಬೇಕು. ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ವೀರ ಮರಣವನ್ನಪ್ಪಿದ ಮಹನೀಯರ ತ್ಯಾಗ, ಬಲಿದಾನದ ಸಂಕೇತವಾಗಿ ಮತ್ತು ವೀರಯೋಧರ ಸ್ಮರಣಾರ್ಥ ರಕ್ತದಾನ ಶಿಬಿರ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ತಾಲೂಕಿನ ವಿವಿಧೆಡೆಯಿಂದ ಬಂದಿದ್ದ 200ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಮುಂದಾದರು.

ಶಾಸಕ ಕೆ.ಎಂ.ಉದಯ್, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಪ್ರಾಂಶುಪಾಲ ಕೆ.ಬಿ.ನಾರಾಯಣ್, ಶಿಬಿರದ ಆಯೋಜಕ ಕೃಷ್ಣ, ರೋಟರಿ ಸಂಸ್ಥೆ ಅಧ್ಯಕ್ಷ ಚನ್ನಂಕೇಗೌಡ, ವಿವಿಧ ಸಂಘಟನೆಯ ಪದಾಧಿಕಾರಿಗಳಾದ ವಿ.ಕೆ.ಜಗದೀಶ್, ಲಿಂಗನದೊಡ್ಡಿ ರಾಮಕೃಷ್ಣ, ಲೋಕೇಶ್, ಪೊಲೀಸ್ ಸಿದ್ದರಾಜು, ತೈಲೂರು ರಘು, ತಿಪ್ಪೂರು ರಾಜೇಶ್ ಹಾಗೂ ಶಿವಕುಮಾರ್, ಗಣೇಶ, ನವೀನ್, ಶಿವಪ್ರಸಾದ್, ಅನಿ, ರಾಜೇಶ್, ಕೀರ್ತೀ, ಯೋಗ, ಪತ್ರಕರ್ತರಾದ ಎಂ.ಪಿ.ವೆಂಕಟೇಶ್, ಎಂ.ಆರ್.ಚಕ್ರಪಾಣಿ, ಸಿ.ಹರೀಶ್ ಹಾಗೂ ವಿವಿಧ ಸಂಘಟನೆಯ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ