ಕನ್ನಡಪ್ರಭ ವಾರ್ತೆ ಹಾಸನ
ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆಸ್ಪತ್ರೆ ಸೇರಿದಂತೆ ಎಲ್ಲಿ ಜನರಿಗೆ ಕಾನೂನಿನ ಅವಶ್ಯಕತೆ ಇರುತ್ತದೆ ಅಂತಹ ಸ್ಥಳಗಳಲ್ಲಿ ರಕ್ಷಣೆ ಪಡೆಯಬೇಕು ಎಂಬ ಯೋಜನೆಯಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನೆರವಿಗೆ ನಿವೃತ್ತ ವಕೀಲರನ್ನು ನೇಮಿಸಲಾಗಿದೆ ಯಾರು ಸಹ ಹಣ ನೀಡುವಂತಿಲ್ಲ, ಸರ್ಕಾರ ಹಣ ನೀಡುತ್ತದೆ. ಉಚಿತ ಕಾನೂನು ಸಲಹೆ ಪ್ರಯೋಜನವನ್ನು ಪಡೆದುಕೊಳ್ಳುವ ಮೂಲಕ ಕಾನೂನಿನಲ್ಲಿನ ತೊಡಕುಗಳನ್ನು ಪರಿಹರಿಸಿಕೊಳ್ಳಬೇಕು ಎಂದರು. ಉಚಿತ ಕಾನೂನು ಸಲಹೆ ಕೇಂದ್ರದಲ್ಲಿ ತಿಮ್ಮಶೆಟ್ಟಿ ಎಂಬ ವಕೀಲರನ್ನು ನೇಮಿಸಲಾಗಿದ್ದು, ವಕೀಲರಿಂದ ಹಣ ಬೇಡಿಕೆ ಬಂದರೆ ನೇರವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಗೆ ಮಾಹಿತಿ ನೀಡಬೇಕು ಉಚಿತ ಕಾನೂನು ಸಲಹಾ ಕೇಂದ್ರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಲತಾ ಕುಮಾರಿ ಮಾತನಾಡಿ ಕಾನೂನು ಅರಿವು ಅವಶ್ಯಕತೆ ಇರುವ ಮಹಿಳೆಯರು ಮತ್ತು ಮಕ್ಕಳು ಪ್ರಯೋಜನವನ್ನು ಪಡೆದುಕೊಳ್ಳಬಹುದು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವರ್ಗದವರು, ಮಾನಸಿಕವಾಗಿ ನೊಂದವರು ಉಚಿತ ಕಾನೂನು ಸೇವೆಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ಉಚಿತವಾಗಿ ಕಾನೂನು ಸೇವೆಯನ್ನು ಪಡೆಯಲು ೧೫೧೦೦ ಸಂಖ್ಯೆಗೆ ಕರೆ ಮಾಡಿ ತಮ್ಮಗೆ ಅವಶ್ಯಕತೆ ಇರುವ ಕಾನೂನು ನೆರವು ಹಾಗೂ ಕಾನೂನು ಕೇಂದ್ರದ ವಿವರವನ್ನು ಪಡೆಯಬಹುದಾಗಿದೆ ಅಥವಾ ನೇರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಾನೂನು ಸಲಹಾ ಕೇಂದ್ರಕ್ಕೆ ಭೇಟಿ ನೀಡಿ ವಕೀಲರೊಂದಿಗೆ ಸಮಾಲೋಚಿಸಿ ಸಲಹೆಗಳನ್ನು ಪಡೆಯಬಹುದಾಗಿದೆ ಎಂದರು.ಕಂದಾಯ ಮತ್ತು ವಿವಿಧ ಇಲಾಖಾ ಕೆಲಸ ಕಾರ್ಯಗಳಿಗೆ ಮತ್ತು ವಿವಿಧ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಚಿತವಾಗಿ ಕಾನೂನು ಸಲಹೆಯನ್ನು ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು. ಈ ವೇಳೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾಧಿಕಾರಿಯವರ ಕಾನೂನು ಸಲಹೆಗಾರರಾದ ವೆಂಕಟೇಶ್, ಮತ್ತಿತರರು ಇದ್ದರು.