ಭಟ್ಕಳ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

KannadaprabhaNewsNetwork |  
Published : Jul 07, 2024, 01:24 AM IST
ಪೊಟೋ ಪೈಲ್ : 9ಬಿಕೆಲ್6, ಪೊಟೋ ಪೈಲ್ : 9ಬಿಕೆಲ್7 | Kannada Prabha

ಸಾರಾಂಶ

ಭಟ್ಕಳ ತಾಲೂಕಿನ ಅಳ್ವೆಕೋಡಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವದ 8ನೇ ದಿನದ ಕಾರ್ಯಕ್ರಮ ಪರ್ತಗಾಳಿ ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವದ 8ನೇ ದಿನದ ಕಾರ್ಯಕ್ರಮ ಪರ್ತಗಾಳಿ ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಶನಿವಾರ ನಡೆದ ಉತ್ಸವದ ಎಂಟನೇ ದಿನದ ಕಾರ್ಯಕ್ರಮದಲ್ಲಿ ಪರ್ತಗಾಳಿ ಶ್ರೀಗಳ ಉಪಸ್ಥಿತಿಯಲ್ಲಿ ಹೋಮ ಹವನಗಳಿಗೆ ಲಘು ಪೂರ್ಣಾಹುತಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಧರ್ಮದರ್ಶಿಗಳಾದ ನಾರಾಯಣ ದೈಮನೆ, ಹನುಮಂತ ನಾಯ್ಕ, ಅರವಿಂದ ಪೈ, ಮಾರಿಜಾತ್ರಾ ಮಹೋತ್ಸವದ ಅಧ್ಯಕ್ಷ ರಾಮಾ ಮೊಗೇರ, ಆಡಳಿತ ಮಂಡಳಿಯ ಸದಸ್ಯರು, ಊರಿನ ಪ್ರಮುಖರಿದ್ದರು. ಬೆಳಗ್ಗೆ ಗಣಪತಿ ಪೂಜೆ, ಪಂಚದುರ್ಗಾ ಹವನ, ಶ್ರೀ ಸೂಕ್ತ ಹವನ, ಲಕ್ಷ ಕುಂಕುಮಾರ್ಚನೆ, ಮಧ್ಯಾಹ್ನ ಮಹಾಮಂಗಳಾರತಿ, ಅನ್ನಸಂತರ್ಪಣೆ ನೆರವೇರಿತು. ಸಂಜೆ ಭಜನಾ ಕಾರ್ಯಕ್ರಮ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಮುಂಬೈನ ಶಂತನು ಶುಕ್ಲ ಸ್ವರ ಸಪ್ತಕ ಮ್ಯೂಸಿಕ್ ಟ್ರಸ್ಟ್ ವತಿಯಿಂದ ಭಕ್ತಿ ಗಾಯನ ಭಕ್ತರ ಮನರಂಜಿಸಿತು. ಉತ್ಸವ ಹಿನ್ನೆಲೆಯಲ್ಲಿ ಅಳ್ವೆಕೋಡಿ ದೇವಸ್ಥಾನಕ್ಕೆ ತಂಡೋಪತಂಡವಾಗಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಶುಕ್ರವಾರ ಮತ್ತು ಶನಿವಾರ ಸಾವಿರಾರು ಭಕ್ತರು ಆಗಮಿಸಿ ದೇವಸ್ಥಾನದಲ್ಲಿ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮ ವೀಕ್ಷಿಸಿ, ದೇವಿ ದರ್ಶನ ಮಾಡಿದರು.

ಭಾನುವಾರ ಉತ್ಸವದ 9ನೇ ದಿನದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ 4 ಗಂಟೆಗೆ ಪರ್ತಗಾಳಿ ಶ್ರೀಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ರಾತ್ರಿ ಸಂಪೂರ್ಣ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌