ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

KannadaprabhaNewsNetwork |  
Published : Sep 02, 2026, 03:45 AM IST
ವೇವ್ ಸಂಘಟನೆಗೆ ಚಾಲನೆ  | Kannada Prabha

ಸಾರಾಂಶ

ತಾಲೂಕಿನ ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ತಾಯಿ ಪ್ರೇಮ (45) ಹಾಗೂ ಪುತ್ರಿ ಪ್ರಿಯಾಂಕ (14) ಮೃತರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ತಾಲೂಕಿನ ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ತಾಯಿ ಪ್ರೇಮ (45) ಹಾಗೂ ಪುತ್ರಿ ಪ್ರಿಯಾಂಕ (14) ಮೃತರು.

ಮನೆಯಲ್ಲಿ ತಾಯಿ ಮತ್ತು ಮಗಳ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಮನನೊಂದ ಪ್ರಿಯಾಂಕ ಕೆರೆಗೆ ಹಾರುವುದಾಗಿ ಹೇಳಿ ಮನೆಯಿಂದ ಓಡಿದ್ದಾಳೆ. ಮಗಳನ್ನು ತಡೆಯಲು ತಾಯಿ ಪ್ರೇಮ ಕೂಡ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಪ್ರಿಯಾಂಕ ಕೆರೆಗೆ ಹಾರಿದ ಬಳಿಕ ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ.

ಸ್ಥಳೀಯರು ಇಬ್ಬರನ್ನು ರಕ್ಷಿಸಲು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡೆಗೆ ಹೆಚ್ಚಿನ ಆದ್ಯತೆ ಉತ್ತಮ ಬೆಳವಣಿಗೆ: ಸಿ.ಎಲ್.ಸುಬ್ಬಯ್ಯ
ಮೌಂಟ್ ಫುಜಿ ಶಿಖರದಲ್ಲಿ ಹಾರಿದ ತ್ರಿವರ್ಣ ಧ್ವಜ