ಕನ್ನಡಪ್ರಭ ವಾರ್ತೆ ಹಾಸನ
ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಕಳೆದ ಎಂಟು ತಿಂಗಳ ಹಿಂದಷ್ಟೇ ಭರತ್‌ಗೆ ಅರಸೀಕೆರೆ ತಾಲೂಕಿನ ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿತ್ತು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಗೀತಾ ಮನೆ ಬಿಟ್ಟು ಹೋಗಿದ್ದಳು. ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ-ಪಂಚಾಯ್ತಿ ಮಾಡಿದ್ದರು. ಆದರೂ ಪತ್ನಿ ಗೀತಾ ಗಂಡನ ಜೊತೆ ಇರದೆ ತವರು ಮನೆಗೆ ಹೋಗಿದ್ದಳು. ಇದರಿಂದ ಮನನೊಂದಿದ್ದ ತಾಯಿ-ಮಗ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಹಿರಿಸಾವೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.