ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹಾಗೂ ಕಲ್ಲಡ್ಕದ ಮುರಬೈಲ್ ಯೂನಿಯನ್‌ನ ಸಹಯೋಗದೊಂದಿಗೆ ಕಲ್ಲಡ್ಕ ಮ್ಯೂಸಿಯಂನಲ್ಲಿ ಬ್ಯಾರಿ ಭಾಷಾ ದಿನಾಚರಣೆ ನಡೆಯಿತು.
ಬಂಟ್ವಾಳ: ಯಾವುದೇ ಜನ ಸಮುದಾಯದ ಮಾತೃಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ. ಆ ಸಮುದಾಯದ ಪರಿಪೂರ್ಣ ಬದುಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಚ್. ಅಭಿಪ್ರಾಯಪಟ್ಟರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹಾಗೂ ಕಲ್ಲಡ್ಕದ ಮುರಬೈಲ್ ಯೂನಿಯನ್‌ನ ಸಹಯೋಗದೊಂದಿಗೆ ಕಲ್ಲಡ್ಕ ಮ್ಯೂಸಿಯಂನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ಯಾರಿ ಭಾಷಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾತೃಭಾಷೆಯನ್ನು ಉಳಿಸಿ, ಬೆಳೆಸುವ ಕಾರ್ಯ ನಿರಂತರವಾಗಿ ನಡೆದಾಗ ಮಾತ್ರ ಆ ಸಮುದಾಯ ಜೀವಂತವಾಗಿರಲು ಸಾಧ್ಯ ಎಂದರು. ಬ್ಯಾರಿ ಭಾಷಾ ದಿನಾಚರಣೆಯ ಭಿತ್ರಿಪತ್ರ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಮಾತನಾಡಿ, ಭಾಷೆಯ ಬೆಳವಣಿಗೆ ಯಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯವಾಗಿದ್ದು, ಹಿರಿಯ ವ್ಯಕ್ತಿಗಳ ಅಂತ್ಯಕ್ರಿಯೆಯ ಜೊತೆಗೆ ನಮ್ಮ ಆಚಾರ, ವಿಚಾರ, ಸಂಸ್ಕೃತಿ ಕೂಡಾ ಅಂತ್ಯಗೊಳ್ಳುತ್ತದೆ. ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಪದಗಳ ಬಳಕೆ ಕೊರತೆಯಾಗದಂತೆ ಜಾಗರೂಕತೆ ವಹಿಸಬೇಕಾದ ಅಗತ್ಯವಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಂಟ್ವಾಳ ಬ್ಯಾರಿ ಫೌಂಡೇಶನ್ ಅಧ್ಯಕ್ಷ ಪಿ.ಎ. ರಹೀಮ್, ಬಂಟ್ವಾಳ ತಾಲೂಕು ಸಂಯುಕ್ತ ಜಮಾತ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ದ.ಕ. ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್ ಅಲಿ, ಲೇಖಕಿ ಡಾ. ಜುವೇರಿಯಾ ಮುಫೀದಾ, ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಲತೀಫ್ ನೇರಳಕಟ್ಟೆ ಮಾತನಾಡಿದರು.ಕಲ್ಲಡ್ಕ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ಲ ಹಾಜಿ ಕೋಡಿ, ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ರಾಜ್ಯ ಕಾರ್ಯದರ್ಶಿ ಇಮ್ತಿಯಾಝ್ ಗೋಳ್ತಮಜಲು, ಮುರಬೈಲ್ ಯೂನಿಯನ್ ಅಧ್ಯಕ್ಷ ಹಬೀಬ್ ಡೈಲಿ ಫ್ರೆಶ್, ಕಲ್ಲಡ್ಕ ಮ್ಯೂಸಿಯಂನ ಮುಹಮ್ಮದ್ ಯಾಸಿರ್, ಬ್ಯಾರಿ ಅಕಾಡಮಿಯ ಮಾಜಿ ಸದಸ್ಯರಾದ ಹುಸೈನ್ ಕಾಟಿಪಳ್ಳ, ಝಕರಿಯಾ ಕಲ್ಲಡ್ಕ, ಪಿ.ಮಹಮ್ಮದ್ ಪಾಣೆಮಂಗಳೂರು ಭಾಗವಹಿಸಿದ್ದರು. ಸದಸ್ಯರಾದ ಬಿ.ಎಸ್. ಮುಹಮ್ಮದ್, ಹಮೀದ್ ಹಸನ್ ಮಾಡೂರು, ಹಾಜಿ ಯು.ಕೆ. ಹಮೀದ್ ಉಪಸ್ಥಿತರಿದ್ದರು. ಮುಹಮ್ಮದ್ ಶರೀಫ್ ನಿರ್ಮುಂಜೆ, ಅಶ್ರಫ್ ಅಪೊಲೊ ಬ್ಯಾರಿ ಗೀತೆಗಳನ್ನು ಹಾಡಿದರು. ಅಬ್ದುಲ್ ಲತೀಫ್ ಮದನಿ ಕಿರಾಅತ್ ಪಠಿಸಿದರು. ಅಕಾಡಮಿಯ ಸದಸ್ಯ ಅಬೂಬಕರ್ ಅನಿಲಕಟ್ಟೆ ಸ್ವಾಗತಿಸಿ, ಸದಸ್ಯೆ ಸಾರಾ ಅಲಿ ಪರ್ಲಡ್ಕ ವಂದಿಸಿದರು. ಸದಸ್ಯ ಯು.ಎಚ್. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.