ಕನ್ನಡಪ್ರಭ ವಾರ್ತೆ ಕೋಟ
ಅವರು ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ಕೆನರಾ ಬ್ಯಾಂಕ್ ಜ್ಯುಬಿಲಿ ಎಜ್ಯುಕೇಶನ್ ಫಂಡ್ ವತಿಯಿಂದ ದಿ. ನ್ಯಾಯಮೂರ್ತಿ ಅಮ್ಮೆಂಬಳ ನಾರಾಯಣ ಪೈ ಅವರ ಸ್ಮರಣಾರ್ಥ ೨೦೨೩-೨೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಗ್ರಾಮಾಂತರದ ಕನ್ನಡ ಮಾಧ್ಯಮದ ಆಯ್ದ ೨೦ ಪ್ರೌಢಶಾಲೆಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಶಾಲೆಗಳ ೨೬ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ನಗದು ಬಹುಮಾನ ಮತ್ತು ಯೋಗಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಅತಿಥಿಗಳು ನೀಡಿ ಗೌರವಿಸಿದರು.೨೬ ವರ್ಷಗಳಿಂದ ಕೆನರಾ ಬ್ಯಾಂಕ್ ಜ್ಯುಬಿಲಿ ಎಜ್ಯುಕೇಶನ್ ಫಂಡ್ ಬೆಂಗಳೂರು ವತಿಯಿಂದ ಉಡುಪಿಯ ವಿವಿಧ ಭಾಗಗಳಲ್ಲಿ ಕಟಪಾಡಿಯ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಎ.ಲಕ್ಷ್ಮೀಬಾಯಿ ಅವರು ನಡೆಸಿಕೊಂಡು ಬರುತ್ತಿರುವ ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.
ಸಂಸ್ಥೆಯ ಶಿಕ್ಷಕ ನರೇಂದ್ರ ಕೋಟ ಅತಿಥಿಗಳನ್ನು ಸ್ವಾಗತಿಸಿ, ನಿರೂಪಿಸಿದರು. ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಸಂಸ್ಥೆಯ ಮುಖ್ಯಶಿಕ್ಷಕ ಜಗದೀಶ ಹೊಳ್ಳ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬಿವಿಟಿಯ ಸಂಪನ್ಮೂಲ ವ್ಯಕ್ತಿ ಮುಕ್ತಾ ಶ್ರೀನಿವಾಸ ಭಟ್ ಉಪಸ್ಥಿತರಿದ್ದರು.