ಮಹಿಳಾ ವಿವಿ, ಸೆಲ್ಕೊ ಸೋಲಾರ್‌ ಲೈಟ್ ಕಂಪನಿ ಮಧ್ಯೆ ಒಡಂಬಡಿಕೆ

KannadaprabhaNewsNetwork |  
Published : Jun 27, 2026, 03:15 AM IST
ಮಹಿಳಾ ವಿವಿ ಹಾಗೂ ಸೆಲ್ಕೊ ಸೋಲಾರ್‌ ಲೈಟ್ ಪ್ರೈವೇಟ್ ಲಿಮಿಟೆಡ್ ಒಪ್ಪಂದ | Kannada Prabha

ಸಾರಾಂಶ

ವಿಜಯಪುರ ನಗರ ಹಾಗೂ ಗ್ರಾಮೀಣ ಮಹಿಳೆಯರ ಸುಸ್ಥಿರ ಅಭಿವೃದ್ಧಿ ಮತ್ತು ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸೆಲ್ಕೊ ಸೋಲಾರ್ ಲೈಟ್ ಪ್ರೈ.ಲಿ. ಬೆಂಗಳೂರು ಸಂಸ್ಥೆಗಳ ನಡುವೆ ಪರಸ್ಪರ ಸಹಕಾರ ಒಪ್ಪಂದ (ಎಂಒಯು)ಕ್ಕೆ ಸಹಿ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರ ಹಾಗೂ ಗ್ರಾಮೀಣ ಮಹಿಳೆಯರ ಸುಸ್ಥಿರ ಅಭಿವೃದ್ಧಿ ಮತ್ತು ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸೆಲ್ಕೊ ಸೋಲಾರ್ ಲೈಟ್ ಪ್ರೈ.ಲಿ. ಬೆಂಗಳೂರು ಸಂಸ್ಥೆಗಳ ನಡುವೆ ಪರಸ್ಪರ ಸಹಕಾರ ಒಪ್ಪಂದ (ಎಂಒಯು)ಕ್ಕೆ ಸಹಿ ಮಾಡಲಾಯಿತು.

ಅಹಲ್ಯಾಬಾಯಿ ಮಹಿಳಾ ಅಧ್ಯಯನ ಕೇಂದ್ರ ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಸಂಘ-ಸಂಸ್ಥೆಗಳೊಂದಿಗೆ ಸಹಭಾಗಿತ್ವದ ಮೂಲಕ ಮಹಿಳೆಯರ ಜೀವನಮಟ್ಟ ಸುಧಾರಣೆಗೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸೆಲ್ಕೊ ಸೋಲಾರ್ ಲೈಟ್ ಕಂಪನಿಯೊಂದಿಗೆ ಮಾಡಿಕೊಂಡಿರುವ ಒಪ್ಪಂದ ಮಹತ್ವದ ಹೆಜ್ಜೆಯಾಗಿದೆ.

ಈ ಒಪ್ಪಂದದಡಿ ನಗರ ಮತ್ತು ಗ್ರಾಮೀಣ ಮಹಿಳೆಯರಲ್ಲಿ ಪರ್ಯಾಯ ಹಾಗೂ ನವೀಕರಿಸಬಹುದಾದ ಇಂಧನ ಮೂಲಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು, ತರಬೇತಿ ಕಾರ್ಯಾಗಾರಗಳು ಹಾಗೂ ಮಹಿಳಾ ಸಬಲೀಕರಣಕ್ಕೆ ಪೂರಕವಾದ ವಿವಿಧ ಚಟುವಟಿಕೆಗಳನ್ನು ಜಂಟಿಯಾಗಿ ಆಯೋಜಿಸಲಾಗುವುದು. ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಪರಿಸರ ಸ್ನೇಹಿ ಜೀವನಶೈಲಿ ಹಾಗೂ ಸುಸ್ಥಿರ ಅಭಿವೃದ್ಧಿಗೆ ಈ ಸಹಯೋಗ ನೆರವಾಗಲಿದೆ ಎಂದು ವಿವಿಯ ಮೂಲಗಳು ತಿಳಿಸಿವೆ.

ಒಪ್ಪಂದ ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ.ಲಕ್ಷ್ಮಿದೇವಿ.ವಾಯ್, ಸೆಲ್ಕೊ ಸೋಲಾರ್‌ ಲೈಟ್ ಕಂಪನಿಯ ಪ್ರಾದೇಶಿಕ ಉಪವ್ಯವಸ್ಥಾಪಕ ಪ್ರಸನ್ನ ಹೆಗಡೆ, ಸಂಹಿತಾ ಮುಜುಂದಾರ, ಮಹಿಳಾ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಭಾಗ್ಯಶ್ರೀ ದೊಡಮನಿ, ಸಹಸಂಶೋಧಕರಾದ ಡಾ.ಸರೋಜಾ ಸಂತಿ, ಡಾ.ರಜಿಯಾಬೇಗಂ ನದಾಫ, ಅಂಬಿಕಾ ಮಾಲಗಾರ, ಸೆಲ್ಕೊ ವಿಜಯಪುರ ಘಟಕದ ವ್ಯವಸ್ಥಾಪಕ ಬಸನಗೌಡ ಬಿರಾದಾರ ಹಾಗೂ ಮಾರಾಟ ಪ್ರತಿನಿಧಿ ಸಂತೋಷ ಪಾಟೀಲ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗಪತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡಿ
ಮಹಿಳಾ ವಿವಿಯಲ್ಲಿ ನೇಮಕಾತಿ ಮರು ಪರಿಶೀಲಿಸಲು ಮನವಿ