ಕನ್ನಡಪ್ರಭ ವಾರ್ತೆ ಮಡಿಕೇರಿ
ಕಾರ್ಯಕ್ರಮದಲ್ಲಿ ಮೌಂಟ್ ಎವರೆಸ್ಟ್ ಪರ್ವತಾರೋಹಣ ಮಾಡಿರುವ ಹಾಗೂ ಅನುಭವಿ, ಭಾರತಿಯ ವಾಯುಸೇನೆಯ ನಿವೃತ್ತ ವಿಂಗ್ ಕಮಾಂಡರ್ ಶ್ರೀಧರನ್, ಭಾರತೀಯ ವಾಯುಸೇನೆಯ ನಿವೃತ್ತ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಮೂರ್ತಿ ಭಾಗವಹಿದ್ದರು.
ಕೊಡಗು ಸೈನಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ನಿವೃತ್ತ ವಿಂಗ್ ಕಮಾಂಡರ್ ಶ್ರೀಧರನ್ ಅವರಿಂದ ಪರ್ವತಾರೋಹಣದ ಬಗ್ಗೆ ಅನೇಕ ಮಾಹಿತಿಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ಪುಷ್ಪಗಿರಿ ವನ್ಯಜೀವಿ ವಲಯದ, ವಲಯ ಅರಣ್ಯಾಧಿಕಾರಿಯಾದ ಅನನ್ಯಕುಮಾರ್ ಜೆ., ಉಪವಲಯ ಅರಣ್ಯಾಧಿಕಾರಿಗಳಾದ ಶಶಿ ಮತ್ತು ಗಣೇಶ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.