ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಬಲವಂತದ ಭೂಸ್ವಾಧೀನಗಳನ್ನು ಕೈಬಿಡಬೇಕು. ಬಗರ್‌ಹುಕುಂ ಭೂಮಿಗಳನ್ನು ಒನ್‌ಟೈಮ್ ಸೆಟಲ್ಮೆಂಟ್ ಆಧಾರದಲ್ಲಿ ಹಂಚುವ ಗಟ್ಟಿತೀರ್ಮಾ ನವನ್ನು ಸರ್ಕಾರ ಕೈಗೊಳ್ಳಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಾಮಾಜಿ ಅವಮಾನ ಕ್ರಿಯೆಗಳ ಮೇಲೆ ಕಠಿಣಕ್ರಮ ಕೈಗೊಳ್ಳಬೇಕು. ಎಲ್ಲಾ ಕಿರು ಹಣಕಾಸು ಸಂಸ್ಥೆಗಳನ್ನು ಆರ್‌ಬಿಐ ನಿಯಂತ್ರಣದಡಿ ತರಬೇಕು. ಸಣ್ಣ ರೈತರು ಮಾಡಿರುವ ಸಾಲ ಮನ್ನಾಕ್ಕೆ ರಾಜ್ಯಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ವಿದ್ಯುತ್ ಸಂಪರ್ಕವೆಚ್ಚವನ್ನು ರೈತರ ಮೇಲೆಯೇ ಹೇರುವ ರೀತಿ ರದ್ದಾಗಬೇಕು. ತುಂಗಭದ್ರಾ ಅಣೆಕಟ್ಟಿನ ಕ್ರಸ್ಟ್‌ಗೇಟ್‌ಗಳನ್ನು ಬದಲಾಯಿಸಲು ಒಂದು ಬೆಳೆಗೆ ನೀರು ಕೊಡುವುದಿಲ್ಲವೆಂಬ ತೀರ್ಮಾನವನ್ನು ಬದಲಾಯಿಸಬೇಕು. ಮೆಕ್ಕೆಜೋಳ ಸೇರಿದಂತೆ ಎಲ್ಲಾ ಬೆಳೆಗಳ ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯಬೇಕು. ಶ್ರಮಜೀವಿಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿಗಳು ಕೂಡಲೇ ಕೊನೆಗೊಳ್ಳಬೇಕು ಎಂದ ಅವರು, ರಾಜ್ಯ ಸರ್ಕಾರವು ಹೊಸ ಕನಿಷ್ಠ ವೇತನ ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಸಮಗ್ರ ಕ್ರಿಯಾಯೋಜನೆ ರೂಪಿಸಬೇಕು. ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ತಂದಿದ್ದ ಹಾಗೂ ಈಗ ಕೇಂದ್ರ ಸರ್ಕಾರ ತರುತ್ತಿರುವ ಭೂ ತಿದ್ದುಪಡಿ ನೀತಿ, ಎಪಿಎಂಸಿ ತಿದ್ದುಪಡಿ ನೀತಿ ಮುಂತಾದವುಗಳನ್ನು ಸರ್ಕಾರ ರದ್ದುಗೊಳಿಸಬೇಕು. ಕೇಂದ್ರ ಸರ್ಕಾರ ತರಲು ಹೊರಟಿರುವ ರಾಷ್ಟ್ರೀಯ ಕೃಷಿನೀತಿಯನ್ನು ತಿರಸ್ಕರಿಸಬೇಕು ಎಂದರು.
ಪ್ರಮುಖರಾದ ಹಿಟ್ಟೂರು ರಾಜು, ಕೆ. ರಾಘವೇಂದ್ರ, ಸಿ.ಬಿ. ಹನುಮಂತಪ್ಪ, ಸಿ.ಚಂದ್ರಪ್ಪ, ಪಿ.ಶೇಖರಪ್ಪ, ಮಂಜಪ್ಪ ಮೊದಲಾದವರು ಹಾಜರಿದ್ದರು.