ಮೇಕೆದಾಟು ಪರಿಹಾರಕ್ಕೆ ಕೈ ನಾಯಕರು ಇಚ್ಛಾಶಕ್ತಿ ತೋರಲಿ: ಸಂಸದ ಬೊಮ್ಮಾಯಿ ಆಗ್ರಹ

KannadaprabhaNewsNetwork |  
Published : Apr 07, 2025, 12:34 AM IST
6ಎಚ್‌ವಿಆರ್6- | Kannada Prabha

ಸಾರಾಂಶ

ಕಳಸಾ- ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾವೇರಿ: ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ಜಾರಿಗಾಗಿ ಈ ಹಿಂದೆ ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ರಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.ನಗರದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಕಳಸಾ- ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ. ಎತ್ತಿನಹೊಳೆ ಯೋಜನೆಗೆ ಕೇಂದ್ರದ ಯಾವುದೇ ಅನುಮತಿ ಅಗತ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಆಗ ನಾವು ಈ ಪ್ರಕರಣ ಅಂತಾರಾಜ್ಯ ವಿವಾದದಲ್ಲಿ ಕೋರ್ಟ್‌ನಲ್ಲಿದೆ ಅಂತ ಹೇಳಿದಾಗ ಕಾಂಗ್ರೆಸ್ ನಾಯಕರು ತಾವು ಅನುಮತಿ ತರುತ್ತೇವೆ ಎಂದಿದ್ದರು. ಈಗ ಅವರ ಮಿತ್ರಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಒತ್ತಾಯಿಸಿದರು.ಕೋವಿಡ್ ಹಗರಣದ ಕುರಿತು ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ಅವರು ನೀಡಿದ ಮಧ್ಯಂತರ ವರದಿ ಕುರಿತು ಕೇಳಿದ ಪ್ರಶ್ನೆಗೆ, ಆ ಬಗ್ಗೆ ವರದಿಯ ವಿವರ ಮಾಹಿತಿ ಇಲ್ಲ ಎಂದರು.ಇದೇ ವೇಳೆ ವಕ್ಫ್ ಕಾಯ್ದೆ ಜಾರಿ ಕುರಿತು ಕೇಳಿದ ಪಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರದಲ್ಲಿ ರೂಲ್ ಆಫ್ ಲಾ ಸ್ಥಾಪನೆ ಆಗಬೇಕು. ವಕ್ಫ್ ಹೆಸರಿನಲ್ಲಿ ದೇವಸ್ಥಾನ, ಸರ್ಕಾರಿ ಕಚೇರಿಗಳು, ಸಂಸತ್ತು ಭವನ ವಕ್ಫ್ ಆಸ್ತಿ ಎಂದು ಹೇಳಿದ್ದಾರೆ. ಅವೆಲ್ಲಕ್ಕೂ ತೆರೆ ಬೀಳಲಿದೆ. ಹಲವಾರು ರೈತರಿಗೆ, ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ಅವರು ಸಿವಿಲ್ ನ್ಯಾಯಾಲಯಕ್ಕೆ ಹೋಗಲು ಅವಕಾಶವಿದೆ. ಅದಕ್ಕೆ ಕಾನೂನು ಪುನರ್ ಸ್ಥಾಪನೆಯಾಗಲಿದೆ. ಬರುವ ದಿನಗಳಲ್ಲಿ ಎಲ್ಲರಿಗೂ ನ್ಯಾಯ ಕೊಡಲು ನಿರ್ಣಯವಾಗಿದೆ. ಅದು ಜಾರಿಯಾದಾಗ ಎಲ್ಲರಿಗೂ ಅನುಭವಕ್ಕೆ ಬರುತ್ತದೆ ಎಂದರು.

10ರಂದು ಜನವಿರೋಧಿ ನೀತಿ ಖಂಡಿಸಿ ಧರಣಿರಾಜ್ಯ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರುದ್ಧ ಏ. 10ರಂದು ಬಿಜೆಪಿ ಹಗಲು- ರಾತ್ರಿ ಧರಣಿ ನಡೆಸಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿ ಸಂಸ್ಥಾಪನೆಯಾಗಿ 45 ವರ್ಷಗಳಾಗಿವೆ. ನಮ್ಮ ಹಿರಿಯರು ಕಟ್ಟಿರುವ ಪಕ್ಷವನ್ನು ಆ ಧ್ಯೇಯ ಉದ್ದೇಶ ಆದರ್ಶಗಳಿಗೆ ಅನುಗುಣವಾಗಿ ಸಮಾಜ ನಿರ್ಮಾಣ ಮಾಡುವ ಸಂಕಲ್ಪ ಮಾಡಿ ಇಂದು ಆಚರಣೆ ಮಾಡಿದ್ದೇವೆ. ನಮ್ಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಬಂದಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!